ಬಿಜೆಪಿ ನಾಯಕಿ ಮತ್ತು ಶಾಸಕಿ ಕೊರೋನಾಗೆ ಬಲಿ

(ನ್ಯೂಸ್ ಕಡಬ) newskadaba.com ರಾಜಸ್ಥಾನ ನ. 30: ರಾಜಸ್ಥಾನದ ಬಿಜೆಪಿ ನಾಯಕಿ ಮತ್ತು ಶಾಸಕಿ ಕಿರಣ್ ಮಹೇಶ್ವರಿ ಕೊರೋನಾಗೆ ಬಲಿಯಾಗಿದ್ದಾರೆ. ಕಿರಣ್‌ ಮಹೇಶ್ವರಿ ಅವರು ಮೆಡಂತ ಆಸ್ಪತ್ರೆಯಲ್ಲಿ ಕೊರೋನಾಗೆ‌ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆಗೆ ಫಲಿಸದೇ ಭಾನುವಾರ ರಾತ್ರಿ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದರು. ಮಹೇಶ್ವರಿ ಅವರು ರಾಜ್ಸಾಮಂದ್‌ ಕ್ಷೇತ್ರದಿಂದ ಮೂರು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದರು.

ಕಿರಣ್ ಮಹೇಶ್ವರಿ ಅವರ ಅಕಾಲಿಕ ನಿಧನದಿಂದ ಬಹಳ ಬೇಸರವಾಗಿದೆ. ಅವರ ಕುಟುಂಬ, ಸ್ನೇಹಿತರಿಗೆ ಸಂತಾಪ ಸೂಚಿಸುತ್ತಿದ್ದೇನೆ ಎಂದು ಅಶೋಕ್‌ ಗೆಹ್ಲೋಟ್‌ ಅವರು ಟ್ವೀಟ್‌ ಮಾಡಿದ್ದಾರೆ. ಸ್ಪೀಕರ್ ಜೋಶಿ ಕೂಡ ಟ್ವೀಟ್‌ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ

Also Read  ಮಂಗಳೂರು: ಲಾರಿಗಳ ನಡುವೆ ಭೀಕರ ಅಪಘಾತ ➤ ಇಬ್ಬರು ಮೃತ್ಯು..!

error: Content is protected !!
Scroll to Top