ಪಣಂಬೂರು ಕಡಲತೀರದಲ್ಲಿ ಸ್ವಚ್ಛತಾ ಅಭಿಯಾನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 30. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರ ರಕ್ಷಣಾ ತಂಡದ ವತಿಯಿಂದ ಕಡಲ ತೀರ ಸ್ವಚ್ಛತಾ ಅಭಿಯಾನದ ಅಂಗವಾಗಿ 4ನೇ ಕಾರ್ಯಕ್ರಮವು ಆದಿತ್ಯವಾರದಂದು ಪಣಂಬೂರು ಬೀಚ್‍ನಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಖ್ಯಾತ ಯೋಗ ಗುರು, ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರ ಮಾರ್ಗದರ್ಶನದಲ್ಲಿ ಯೋಗ ಪ್ರಾಣಾಯಾಮ ಮತ್ತು ಧ್ಯಾನ ಶಿಬಿರ ಬೆಳಗ್ಗೆ 7.00 ರಿಂದ 8.00 ಗಂಟೆಯವರೆಗೆ ನಡೆಯಿತು. ಯೋಗ ಶಿಬಿರ ನಡೆಸಿಕೊಟ್ಟ ಖ್ಯಾತ ಯೋಗ ಗುರು, ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಇವರು ಮಾತನಾಡಿ ಕೋವಿಡ್-19 ರೋಗ ಹರಡುವ ಸಂದರ್ಭ ಕೆಲಸ ನಿರ್ವಹಿಸುವ ಗೃಹರಕ್ಷಕರಿಗೆ ಆರೋಗ್ಯದೃಷ್ಟಿಯಿಂದ ಈ ಶಿಬಿರ ಹೆಚ್ಚು ಉಪಯುಕ್ತ ಮತ್ತು ಗೃಹರಕ್ಷಕರ ರಕ್ಷಣಾ ವ್ಯವಸ್ಥೆಯನ್ನು ವೃದ್ಧಿಸಿ, ಆರೋಗ್ಯವನ್ನು ಹೆಚ್ಚಿಸುತ್ತದೆ ಎಂದರು. ಯೋಗ ಶಿಬಿರದ ಬಳಿಕ ಗೃಹರಕ್ಷಕರು ಮತ್ತು ಪೌರರಕ್ಷಣಾ ತಂಡದ ಕಾರ್ಯಕರ್ತರು ಪಣಂಬೂರು ಕಡಲ ತೀರದ ಸ್ವಚ್ಛತಾ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ಪಡೆಯ ಚೀಫ್ ವಾರ್ಡನ್ ಡಾ|| ಮುರಲೀಮೋಹನ್ ಚೂಂತಾರು ಅವರ ಅಧ್ಯಕ್ಷತೆಯಲ್ಲಿ ಜರಗಿತು. ಸುಮಾರು 30 ಮಂದಿ ಈ ಶಿಬಿರದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಗಳಾದ ಸುನಿಲ್ ಕುಮಾರ್, ದಿವಾಕರ್, ಸುನಿಲ್, ನಿಶಾಲ್, ದುಶ್ಯಂತ್ ರೈ, ಸರಸ್ವತಿ, ಕವಿತಾ, ಪೌರರಕ್ಷಣಾ ಪಡೆಯ ಅಜಯ್ ಹಾಗೂ ಇನ್ನಿತರ ಗೃಹರಕ್ಷಕ/ಗೃಹರಕ್ಷಕಿಯರು ಹಾಜರಿದ್ದರು.

Also Read  ಬೈಕ್- ಓಮ್ನಿ ನಡುವೆ ಅಪಘಾತ ➤ ಹಿರಿಯ ಯಕ್ಷಗಾನ ಕಲಾವಿದ ಮೃತ್ಯು..!

error: Content is protected !!
Scroll to Top