ಮಂಗಳೂರು: ತಮ್ಮದೇ ಮೀನಿನ ಬಲೆಯಲ್ಲಿ ಸಿಲುಕಿ ಮೀನುಗಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು . 30: ಕಳೆದ ದಿನ ಬೈಕಂಪಾಡಿ ಬಳಿ ಸಮುದ್ರದಲ್ಲಿ ಮೀನುಗಾರನು ಮೀನು ಹಿಡಿಯಲು ಹರಡುತ್ತಿದ್ದ ಬಲೆಗೆ ಸಿಕ್ಕಿಹಾಕಿಕೊಂಡ ದುರಂತ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಬೈಕಂಪಾಡಿಯ ಹೊಸಹಿತ್ಲು ನಿವಾಸಿ ನವೀನ್ ಕರ್ಕೇರ(32) ಎಂದು ಗುರುತಿಸಲಾಗಿದೆ.

 

 

ಮೀನಿಗೆ ಬಲೆ ಹಾಕುವ ಸಂದರ್ಭದಲ್ಲಿ ಬಲೆಗೆ ಅವರ ಕಾಲು ಬೆರಳು ಸಿಲುಕಿದ್ದು, ಅವರು ನೀರಿಗೆ ಬಿದ್ದು ಮುಳುಗಿದ್ದಾರೆ. ಇವರು ಸಿಕ್ಕಿಹಾಕಿಕೊಂಡಿದ್ದರಿಂದ ನೀರಿನಲ್ಲಿ ಈಜಿ ದಡ ಸೇರಲು ಸಾಧ್ಯವಾಗಲಿಲ್ಲ. ಕೂಡಲೇ ಮತ್ತೊಂದು ದೋಣಿಯಲ್ಲಿದ್ದ ಮೀನುಗಾರರು ಆತನ ರಕ್ಷಣೆಗೆ ಧಾವಿಸಿದ್ದು ಕೂಡಲೇ ಅವರನ್ನು ಕರೆತಂದು ಆಸ್ಪತ್ರೆಗೆ ದಾಖಲಿಸಿದರು. ಆದರೇ ಅಷ್ಟರಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Also Read  ಮೊಬೈಲ್‍ ಆವಾಂತರ ► ಹಾಸ್ಟೆಲ್ ಮಹಡಿಯಿಂದ ಆಯತಪ್ಪಿ ಬಿದ್ದ ವಿದ್ಯಾರ್ಥಿನಿ

 

error: Content is protected !!
Scroll to Top