ಗೋಡೆ ಬರಹದ ಕಿಡಿಗೇಡಿಗಳನ್ನ ಬಂಧಿಸಲು ಯು ಟಿ ಖಾದರ್ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು . 30: ನಗರದಲ್ಲಿ ಗೋಡೆ ಬರಹ ಬರೆಯುವುದನ್ನ ತೀವ್ರವಾಗಿ ಖಂಡಿಸುತ್ತೇವೆ ಎಂದು ಮಂಗಳೂರಿನಲ್ಲಿ ಮಾಜಿ ಸಚಿವ ಯು.ಟಿ‌.ಖಾದರ್ ಹೇಳಿದ್ದಾರೆ. ಇದನ್ನ ಯಾರೇ ಆದರೂ ಸಹಿಸಲು ಯಾವುದೇ ಕಾರಣಕ್ಕೂ ಸಾದ್ಯವಿಲ್ಲ. ಇದರ ಪತ್ತೆ ಮಾಡುವದು ಬಿಜೆಪಿ ಸರ್ಕಾರ ಮತ್ತು ಪೊಲೀಸ್ ಇಲಾಖೆ ಜವಾಬ್ದಾರಿಯಾಗಿದೆ ಎಂದರು. ಆದಷ್ಟು ಬೇಗ ಇವರಿಗೆ ಬೆಂಬಲವಾಗಿರುವರನ್ನ ಪತ್ತೆ ಹಚ್ಚಿ ಷಡ್ಯಂತ್ರ ಬಯಲು ಮಾಡಬೇಕಿದೆ. ಗುಪ್ತಚರ ಇಲಾಖೆ ಏನು ಮಾಡ್ತಿದೆ ಎಂದು ಪ್ರಶ್ನಿಸಿದ ಅವರು ಮತ್ತೆ ಮತ್ತೆ ಹೀಗ್ಯಾಕೆ ಅಗ್ತಿದೆ ಎಂದಿದ್ದಾರೆ.

ಬರೆದವರನ್ನ ಪತ್ತೆ ಹಚ್ಚಿ ಅಂಥವರನ್ನ ಬೇರೆ ದೇಶಕ್ಕೆ ಬಿಟ್ಟು ಬರಬೇಕು. ಅಂಥವರಿಗೆ ನಮ್ಮ ಮಣ್ಣಿನಲ್ಲಿ ಇರಲು ಯಾವುದೇ ಹಕ್ಕಿಲ್ಲ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇವತ್ತು ಕಾನೂನಿಗೆ ಹೆದರದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದ ಖಾದರ್, ಗೋಡೆ ಬರಹ, ಇನ್ನಿತರ ವಿಚಾರಗಳು ಕಾಂಗ್ರೆಸ್ ಸರ್ಕಾರ ಇದ್ದಾಗ ಇರಲಿಲ್ಲ. ಆದ್ರೆ ಬಿಜೆಪಿ ಬಂದಾಗ ಸಮಾಜ ದ್ರೋಹಿ ಶಕ್ತಿಗಳಿಗೆ ಧೈರ್ಯ ಬರುತ್ತೆ. ಇದಕ್ಕೆ ಜಿಲ್ಲೆಯ ಎಂಪಿ, ಎಂಎಲ್ಎಗಳು ಉತ್ತರ ಕೊಡಬೇಕು ಎಂದು ಅವರು ಒತ್ತಾಯಿಸಿದರು.

Also Read  ಲ್ಯಾಪ್ ಟಾಪ್ ಕಳ್ಳತನ- ಇಬ್ಬರ ಬಂಧನ

error: Content is protected !!
Scroll to Top