(ನ್ಯೂಸ್ ಕಡಬ) newskadaba.com ಮಾಣಿ ಡಿ. 01: ಬುಡೋಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಹೆದ್ದಾರಿಯಲ್ಲಿ ಮುಗುಚಿ ಬಿದ್ದ ಘಟನೆ ನಡೆದಿದೆ. ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರಿನಿಂದ ಮಂಗಳೂರಿಗೆ ಟಯರ್ ಗಳನ್ನು ಹೇರಿಕೊಂಡು ಬರುತ್ತಿದ್ದ ಲಾರಿ ಬೆಳಿಗ್ಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಮುಗುಚಿದ ಪರಿಣಾಮ ಅಪಘಾತ ಸಂಭವಿಸಿದೆ. ಲಾರಿಯನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದ್ದಾರೆ.






