(ನ್ಯೂಸ್ ಕಡಬ) newskadaba.com ಧರ್ಮಸ್ಥಳ ಡಿ. 01: ಹೊಸ ಕೆ.ಎಸ್.ಆರ್.ಟಿ.ಸಿ ಬಸ್ಸು ತಂಗುದಾಣದ ಬಳಿ ಅನುಮಾನಸ್ಪದವಾಗಿ ಓಡಾಡುತ್ತಿದ್ದ ಯುವಕ ನೋರ್ವನನ್ನು ವಶಕ್ಕೆ ಪಡೆದ ಪೊಲೀಸರು ,ಆತನಿಂದ 750 ಗ್ರಾಂ. ಗಾಂಜಾ ವಶಪಡಿಸಿಕೊಂಡಿದ್ದಾರೆ. ಆರೋಪಿ ಧರ್ಮಸ್ಥಳ ಪೊಸೊಳಿಕೆ ನಿವಾಸಿ ಮಂಜುನಾಥ ಆಲಿಯಾಸ್ ಮಂಜು( 29) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಧರ್ಮಸ್ಥಳ ಪೊಲೀಸ್ ಠಾಣೆಯ ಉಪ ನಿರೀಕ್ಷ ಚಂದ್ರಶೇಖರ ಕೆ. ಹಾಗೂ ಸಿಬಂದಿ ಗಸ್ತು ನಡೆಸುತ್ತಿದ್ದಾಗ ಮಂಜುನಾಥ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ಸುತ್ತಾಡುತ್ತಿದ್ದ ಎನ್ನಲಾಗಿದೆ. ಈ ವೇಳೆ ಆತನನ್ನು ವಶಕ್ಕೆ ಪಡೆದ ಪೊಲೀಸರು ಆತನ ಬ್ಯಾಗ್ ಪರಿಶೀಲಿಸಿದಾಗ 15 ಸಾವಿರ ರೂ. ಮೌಲ್ಯದ ಗಾಂಜಾ ಗಿಡದ ಗೆಲ್ಲು, ಗಾಂಜಾ ಮೊಗ್ಗುಗಳು, ಎಲೆ, ಬೀಜಗಳು ಸೇರಿ ಒಟ್ಟು 750 ಗ್ರಾಂ ಗಾಂಜಾ ಪತ್ತೆಯಾಗಿತ್ತು. ಈ ಸಂಬಂಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸಲಾಗುತ್ತಿದ್ದಾರೆ.