ವಿಟ್ಲ: ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 01: ನೆಟ್ಲಮುಡ್ನೂರು ಗ್ರಾಮದ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿ ಪರಾರಿಯಾದ ಘಟನೆ ಇಂದು ಬೆಳಕಿಗೆ ಬಂದಿದೆ.

 

 

ಉಮ್ಮಾರು ಫಾರುಕ್ ರವರ ಮನೆಯಲ್ಲಿ ಈ ಕಳ್ಳತನ ಪ್ರಕರಣ ನಡೆದಿರುವುದಾಗಿ ಮನೆ ಮಂದಿ ತಿಳಿಸಿದ್ದಾರೆ. ಉಮಾರು ಫಾರುಕ್ ರವರು ಮಲಗಿದ್ದ ಕೋಣೆಗೆ ಪ್ರವೇಶಿಸಿದ ಕಳ್ಳರು ಅಲ್ಲಿದ್ದ ಕಪಾಟಿನಲ್ಲಿರಿಸಲಾಗಿದ್ದ ಚಿನ್ನಾಭರಣವನ್ನು ದೋಚಿ ಹಿಂಭಾಗಿಲ ಮೂಲಕ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸ್ ಠಾಣಾ ಎಸ್.ಐ ವಿನೋದ್ ರೆಡ್ಡಿಯವರ ನೇತೃತ್ವದ ಪೊಲೀಸರ ತಂಡ ಆಗಮಿಸಿ ಮಾಹಿತಿ ಸಂಗ್ರಹಿಸಿದ್ದು, ಶವಾನದ ಹಾಗೂ ಬೆರಳಚ್ಚು ತಜ್ಞರನ್ನೂ ಕರೆಸಿ ಪರಿಶೀಲನೆ ನಡೆಸಲಾಗಿದೆ.

Also Read  ಶಾಲಾ ಬಾಲಕ ನಾಪತ್ತೆ ! ➤ ದೂರು ದಾಖಲು

 

error: Content is protected !!
Scroll to Top