(ನ್ಯೂಸ್ ಕಡಬ) newskadaba.com ಬೆಂಗಳೂರು ಡಿ. 02:ರಾಜ್ಯ ಸರ್ಕಾರ ಮರಾಠಾ ಅಭಿವೃದ್ದಿ ನಿಗಮ ರಚನೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಡಿ.5 ರಂದು ಕರೆ ನೀಡಿರುವ ಕರ್ನಾಟಕ ಬಂದನ್ನು ವಿರೋಧಿಸಿ ಮಂಗಳವಾರ ನಗರದಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಕರ್ನಾಟಕ ಮಾಧ್ಯಮ ಪರಿಷತ್ ಮತ್ತು ಜೀಸ್ನಾ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಂಸ್ಥೆ ಹಾಗೂ ಸುದರ್ಶನ ಸಮೀತಿ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ನಂತರ ಡಾ.ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಕರ್ನಾಟಕ ಬಂದ್ ನಡೆಸುವವರ ಆಸ್ತಿ ಜಪ್ತಿ ಮಾಡುವಂತೆ ಆಗ್ರಹಿಸಿದರು. ಪಾಲಿಕೆ ಮಾಜಿ ಸದಸ್ಯ ರಾಹುಲ್ ಜಾಧವ್, ದಲಿತ ಪರ ಸಂಘಟನೆಯ ಅಡಿವೆಪ್ಪ ಸಾಲಗಲ್ ಇತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.