ಮಂಗಳೂರು: ವಿಮಾನ ನಿಲ್ದಾಣಕ್ಕೆ ಕೋಟಿ- ಚೆನ್ನಯ ನಾಮಕರಣ ಆಗ್ರಹಿಸಿ ಡಿ. 7ರಂದು ಬೈಕ್ ರ್‍ಯಾಲಿ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 02 : ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ- ಚೆನ್ನಯ ನಾಮಕರಣ ಮಾಡಬೇಕೆಂದು ಆಗ್ರಹಿಸಿ ಬಿಲ್ಲವ ಬ್ರಿಗೇಡ್ ನೇತೃತ್ವದಲ್ಲಿ ಕೋಟಿ-ಚೆನ್ನಯ ಸಂಚಲನ ಸಮಿತಿ ಸಹಯೋಗದೊಂದಿಗೆ ಡಿ.7ರಂದು ಬಜ್ಪೆ ವಿಮಾನ ನಿಲ್ದಾಣದವರೆಗೆ ಬೈಕ್ ರ್‍ಯಾಲಿ ಆಯೋಜಿಸಲಾಗಿದೆ.

 

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಚಲನ ಸಮಿತಿ ಪ್ರಧಾನ ಸಂಚಾಲಕ ಸತ್ಯಜಿತ್ ಸುರತ್ಕಲ್, ಡಿ.7ರಂದು ಬೆಳಿಗ್ಗೆ 10ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಿಂದ ಹೊರಡುವ ಬೈಕ್ ರ್‍ಯಾಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ ಸಾಗಲಿದೆ. ರ್ಯಾಲಿಯಲ್ಲಿ ಕನಿಷ್ಠ 500 ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.

Also Read  ಬಂಟ್ವಾಳ: ಸರಕಾರಿ ಬಸ್‌ನಲ್ಲಿ ಮಹಿಳೆಯ ಜಡೆ ಸವರಿದ ವ್ಯಕ್ತಿ ➤ ಪ್ರಕರಣ ದಾಖಲು

error: Content is protected !!
Scroll to Top