ಮಂಗಳೂರು: ಪತ್ರಕರ್ತ, ಸ್ಯಾಕ್ಸೋಫೋನ್ ವಾದಕ ದಯಾನಂದ ಕುಡುಪು ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 02 : ಪತ್ರಕರ್ತ, ಸ್ಯಾಕ್ಸೋಫೋನ್ ವಾದಕ ದಯಾನಂದ ಕುಡುಪು (55) ಸೋಮವಾರ ಸಂಜೆ ತನ್ನ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರಿಯರು ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ‘ವಾರ್ತಾಭಾರತಿ’ ದೈನಿಕದಲ್ಲಿ ಉಪಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ವಾರದ ಹಿಂದೆ ಅಸ್ವಸ್ಥರಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೊಸದಿಗಂತ, ವಿಜಯಕರ್ನಾಟಕ ಪತ್ರಿಕೆಗಳಲ್ಲಿ ಅವರು ಸೇವೆ ಸಲ್ಲಿಸಿದ್ದರು.

ಉತ್ತಮ ಸ್ಯಾಕ್ಸೋಫೋನ್ ವಾದಕರಾಗಿದ್ದ ಅವರು ಮಂಗಳೂರು ಪ್ರೆಸ್ಕ್ಲಬ್ ದಿನಾಚರಣೆ, ದ.ಕ.ಜಿಲ್ಲಾ ಪತ್ರಕರ್ತರ ಸಮ್ಮೇಳನ ಸೇರಿದಂತೆ , ಜಿಲ್ಲೆ ಹಾಗೂ ರಾಜ್ಯಮಟ್ಟದ ಹಲವು ಕಾರ್ಯಕ್ರಮಗಳಲ್ಲಿ ತನ್ನ ಕಲಾ ನೈಪುಣ್ಯತೆಯನ್ನು ಪ್ರದರ್ಶಿಸಿದ್ದರು.

Also Read  ಉಭಯ ದೇಶಗಳ ನಡುವೆ ಮಹತ್ವದ 4ಒಪ್ಪಂದಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಹಿ

 

error: Content is protected !!
Scroll to Top