ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಸಹಕಾರ ಸಂಘ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಡಿ. 02: ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ 2019-20 ನೇ ಸಾಲಿನ ಸಾಧನೆಗೆ ಉತ್ತಮ ಸಹಕಾರ ಸಂಘ ಪ್ರಶಸ್ತಿಯು ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಲಭಿಸಿದೆ.

 

ನ.27 ರಮದು ಮಂಗಳೂರಿನಲ್ಲಿ ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಎನ್.ಎಂ. ರಾಜೇಂದ್ರ ಕುಮಾರ್ ರವರು ಸಂಘದ ಅಧ್ಯಕ್ಷ ಅನಿಲ್ ರೈ ಚಾವಡಿಬಾಗಿಲು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಆಳ್ವರವರನ್ನು ಪ್ರಶಸ್ತಿ ನೀಡಿ ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಬೆಳ್ಳಾರೆ ಪ್ರಾ.ಕೃ.ಪ.ಸಹಕಾರಿ ಸಂಘದ ನಿರ್ದೇಶಕ ಕರುಣಾಕರ ಆಳ್ವ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Also Read  ಉಪ್ಪಿನಂಗಡಿ: ಟ್ಯಾಂಕರ್ ದುರಂತಕ್ಕೆ ಹತ್ತು ವರ್ಷ ! ➤ ಅಚ್ಚಳಿಯದೆ ಉಳಿದ ಕಹಿ ನೆನಪು

 

error: Content is protected !!
Scroll to Top