ಮೀನುಗಾರಿಕಾ ದೋಣಿ ದುರಂತ ➤ ಶಾಸಕ ವೇದವ್ಯಾಸ್ ಕಾಮತ್ ಸಾಂತ್ವನ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 02 : ಧಕ್ಕೆಯ ಅಳಿವೆ ಬಾಗಿಲಿನಲ್ಲಿ ಸಂಭವಿಸಿದ ಮೀನುಗಾರಿಕಾ ದೋಣಿ ದುರಂತದಿಂದ ಮೃತಪಟ್ಟವರಿಗೆ ಸರಕಾರದಿಂದ ಪರಿಹಾರ ಧನ ಘೋಷಿಸುವ ಕುರಿತು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರೊಂದಿಗೆ ಚರ್ಚಿಸಿದ್ದೇನೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

 

ಬಂದರಿಗೆ ಭೇಟಿ ನೀಡಿದ ವೇಳೆ ಮಾತನಾಡಿದ‌ ಶಾಸಕ ಕಾಮತ್, ಬೋಟ್ ದುರಂತಕ್ಕೀಡಾಗಿರುವ‌ ವಿಚಾರ ತಿಳಿದು ಮನಸ್ಸಿಗೆ ಅತೀವ ನೋವಾಗಿದೆ. ವಿಚಾರ ತಿಳಿದ ತಕ್ಷಣವೇ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದೇನೆ. ಇಬ್ಬರ ಮೃತ ದೇಹ ಪತ್ತೆಯಾಗಿದ್ದು ಕಣ್ಮರೆಯಾಗಿರುವ ಮೀನುಗಾರರ ಶೋಧ ಕಾರ್ಯ ಪ್ರಾರಂಭಿಸಲಾಗಿದೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.ಪರಿಹಾರದ ಕುರಿತು ಈಗಾಗಲೇ ಮೀನುಗಾರಿಕಾ ಸಚಿವರೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ‌ ಸಚಿವರ ಜೊತೆ ಚರ್ಚಿಸಿದ್ದೇನೆ. ಸಚಿವರ ಮೂಲಕ ಮುಖ್ಯಮಂತ್ರಿಗಳಿಗೂ ವಿಚಾರ ತಿಳಿಸಿದ್ದೇವೆ. ತಕ್ಷಣವೇ ಪರಿಹಾರ ಧನ ಘೋಷಿಸುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

Also Read  ಮರ್ಧಾಳ: ಕ್ಯಾನ್ಸರ್ ಗೆ ತುತ್ತಾಗಿದ್ದ ಬಾಲಕ ವಿಧಿವಶ

 

error: Content is protected !!
Scroll to Top