ಮಂಗಳೂರು :ಆರೋಪಿಯ ಸುಳಿವು ಕೊಟ್ಟವರಿಗೆ 2 ಲಕ್ಷ ಬಹುಮಾನ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 02 : ಸುಳ್ಯದಲ್ಲಿ ಕೊಲೆ ಮತ್ತು ಲೂಟಿ ಪ್ರಕರಣದಲ್ಲಿ ಭಾಗಿಯಾಗಿ ತಪ್ಪಿಸಿಕೊಂಡ ಆರೋಪಿಯ ಮಾಹಿತಿ ನೀಡಿದವರಿಗೆ 2 ಲಕ್ಷ ರೂ. ನಗದು ಬಹುಮಾನವನ್ನು ಕೇರಳ ಪೊಲೀಸ್ ಮಹಾನಿರ್ದೇಶಕರು ಘೋಷಿಸಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಬ್ದುಲ್ ಅಜೀಜ್ (33) ಎಂಬ ಆರೋಪಿ ಕೇರಳದ ಕಾಸರಗೋಡು ಜಿಲ್ಲೆಯ ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ ಮತ್ತು ಲೂಟಿ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಈತನನ್ನು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನ್ಯಾಯಾಲಯಕ್ಕೆ ಸೆಪ್ಟೆಂಬರ್ 14 ರಂದು ಹಾಜರುಪಡಿಸಬೇಕಿತ್ತು. ಈ ಸಂದರ್ಭದಲ್ಲಿ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಆರೋಪಿಯ ಬಗ್ಗೆ ಮಾಹಿತಿ ನೀಡಿದವರಿಗೆ 2 ಲಕ್ಷ ರೂ. ಬಹುಮಾನ ನೀಡುವುದಾಗಿ ಕೇರಳ ಪೊಲೀಸ್ ಮಹಾನಿರ್ದೇಶಕರು ಘೋಷಿಸಿದ್ದಾರೆ.

Also Read  ಮಂಗಳೂರು: ನೂತನ ಸಚಿವ ಎಸ್.ಅಂಗಾರಗೆ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ

error: Content is protected !!
Scroll to Top