ದ.ಕ ಗ್ರಾ.ಪಂ.ಚುನಾವಣೆ ಹಿನ್ನೆಲೆ ➤ ಶಸ್ತ್ರಾಸ್ತ್ರ ಡೆಪಾಸಿಟ್ ಇಡಲು ದ.ಕ. ಡಿಸಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 03: ದ.ಕ. ಜಿಲ್ಲೆಯಲ್ಲಿ ಡಿಸೆಂಬರ್ 22 ಮತ್ತು 27ರಂದು ಗ್ರಾಮ ಪಂಚಾಯತ್‌ಗಳಿಗೆ ಚುನಾವಣೆ ನಡೆಯಲಿರುವುದರಿಂದ ಪರವಾನಿಗೆ ಶಸ್ತ್ರಾಸ್ತ್ರ ಹೊಂದಿರುವವರು ಸಮೀಪದ ಪೊಲೀಸ್ ಠಾಣೆಗಳಲ್ಲಿ ಠೇವಣಿ ಇಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಅವರು, ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಹಾಗೂ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್, ಬೆಳ್ತಂಗಡಿ ತಾಲೂಕಿನ ವೇಣೂರು ಮತ್ತು ಆರಂಬೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯನ್ನು ಹೊರತುಪಡಿಸಿ ಉಳಿದಂತೆ ಎಲ್ಲಾ ತಾಲೂಕಿನಲ್ಲಿ ಪರವಾನಿಗೆ ಹೊಂದಿರುವ ಶಸ್ತ್ರಾಸ್ತ್ರ ಹೊಂದಿರುವವರು ಠೇವಣಿ ಇಡಬೇಕೆಂದು ಸೂಚಿಸಿದ್ದಾರೆ. ಚುನಾವಣೆಯ ಫಲಿತಾಂಶ ಘೋಷಣೆಯಾಗಿ ಒಂದು ವಾರದಲ್ಲಿ ಠೇವಣಿ ಇಡಲಾಗಿದ್ದ ಶಸ್ತ್ರಾಸ್ತ್ರಗಳನ್ನು ಆಯಾ ಪೊಲೀಸ್ ಠಾಣೆಗಳಿಗೆ ತೆರಳಿ ಹಿಂಪಡೆದುಕೊಳ್ಳ ಬಹುದು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

Also Read  ಎಸ್ಡಿಪಿಐ ಪೆರಿಯಡ್ಕ ಬ್ರಾಂಚ್ ವತಿಯಿಂದ ಆಯುಷ್ಮಾನ್ ಭಾರತ್ ಕಾರ್ಡ್ ಅಭಿಯಾನ

 

error: Content is protected !!
Scroll to Top