ಬಂಟ್ವಾಳ: ಆಟೋ ರಿಕ್ಷಾ ಪಲ್ಟಿ ➤ ಮೂರು ದಿನದ ಹೆಣ್ಣು ಹಸುಗೂಸು ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 03: ಬಂಟ್ವಾಳ ತಾಲೂಕಿನ ಬೆಂಜನಪದವು ಸಮೀಪದ ಕಲ್ಪನೆ ತಿರುವು ಬಳಿ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಮೂರು ದಿನದ ಹಸುಗೂಸು ಮೃತಪಟ್ಟಿದ್ದು, ಚಾಲಕ ಸಹಿತ ಇಬ್ಬರು ಮಹಿಳೆಯರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ನಡೆದಿದೆ.

 

 

ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ಗುರುಪುರ ಕೈಕಂಬ ಮೂಲದ ಉಮೈರಾ ಎಂಬವರು ಮೂರು ದಿನಗಳ ಹಿಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಕಳೆದ ದಿನ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆ ಕಡೆ ತೆರಳುವ ವೇಳೆ ಬೆಂಜಪದವು ಸಮೀಪದ ಕಲ್ಪನೆ ತಿರುವು ಬಳಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಉರುಳಿ ಬಿದ್ದಿದೆ. ಘಟನೆಯಲ್ಲಿ ತಾಯಿಯ ಮಡಿಲಲ್ಲಿ ಮಲಗಿದ್ದ ಹಸುಗೂಸು ಹೊರಗೆಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದೆ. ಇಬ್ಬರು ಮಹಿಳೆಯರಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು, ಬಿ.ಸಿ. ರೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಹೆಣ್ಣು ಮಗುವಿಗಾಗಿ ಕಾಯುತ್ತಿದ್ದ ದಂಪತಿಗೆ, ಈಗಾಗಲೇ ನಾಲ್ಕು ಗಂಡು ಮಕ್ಕಳಿದ್ದು, ಐದನೇ ಚೊಚ್ಚಲ ಹೆರಿಗೆಯಲ್ಲಿ ಮಹಾಲಕ್ಷ್ಮಿಯಂತ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ ಮನೆ ಬೆಳಗಬೇಕಿದ್ದ ಕಂದಮ್ಮ ಮನೆ ಸೇರುವ ಮೊದಲೇ ವಿಧಿಯಾಟಕ್ಕೆ ಬಲಿಯಾಗಿದೆ.

Also Read  ಕಡಬ: KSRTC ಚಾಲಕನ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆ ➤ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

 

error: Content is protected !!
Scroll to Top