ವಿಟ್ಲ: ಮುಖಾಮುಖಿಯಾಗಿ ಕಾರುಗಳ ನಡುವೆ ಅಪಘಾತ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 03: ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ಎರಡು ಕಾರುಗಳ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿ ಚಾಲಕ, ಮಗು ಹಾಗೂ ಮಹಿಳೆ ಗಾಯಗೊಂಡ ಘಟನೆ ಇಂದು ನಡೆದಿದೆ.

 

 

ನೇರಳಕಟ್ಟೆ ಮದುವೆ ಹಾಲ್ ಇಂಡಿಯನ್ ಅಡಿಟೋರಿಯಮ್ ನಿಂದ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಕಾರಿನಲ್ಲಿ ಹಿಂತಿರುಗುತ್ತಿದ್ದ ವೇಳೆ ಕೊಡಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ತೆರಳುವ ರಸ್ತೆಯ ಮುಂಭಾಗದಲ್ಲಿ ಮಾಣಿ ಕಡೆಯಿಂದ ಬಂದ ರಿಡ್ಜ್ ಕಾರೊಂದು ಢಿಕ್ಕಿ ಹೊಡೆದಿದ್ದು, ಮಾಣಿ ನಿವಾಸಿಗಳಾದ ವ್ಯಾಗನರ್ ಕಾರಿನ ಚಾಲಕ ನವಾಜ್ ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ವ್ಯಾಗನರ್ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗೊಳೊಂದಿಗೆ ಪಾರಾಗಿದ್ದಾರೆ.

Also Read  ಒಲಿಂಪಿಕ್ಸ್ ನಲ್ಲಿ ಕಂಚು ಗೆದ್ದು ಇತಿಹಾಸ ಬರೆದ ಅಮನ್ ಸೆಹ್ರಾವತ್..!

 

 

error: Content is protected !!
Scroll to Top