ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 04: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಕಬಕ ಸಮೀಪದ ಪೋಳ್ಯದಲ್ಲಿ ಮಂಗಳೂರು ಕಡೆ ಚಲಿಸುತ್ತಿದ್ದ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಅನತಿ ದೂರದಲ್ಲಿದ್ದ ವಿದ್ಯುತ್ ಪರಿವರ್ತಕಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದೆ.

 

 

ಪುತ್ತೂರಿನಿಂದ ರಾತ್ರಿ ಮಂಗಳೂರು ಕಡೆಗೆ ಹೋಗುತಿದ್ದ ಟಿಪ್ಪರ್ ಕಬಕ ಸಮೀಪದ ಪೋಳ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯನ್ನು ಬಿಟ್ಟು ದೂರದಲ್ಲಿದ್ದ ವಿದ್ಯುತ್ ಪರಿವರ್ತಕಕ್ಕೆ ಢಿಕ್ಕಿ ಹೊಡೆದಿದ್ದು, ಢಿಕ್ಕಿಯ ರಭಸಕ್ಕೆ ವಿದ್ಯುತ್ ತಂತಿಯ ಕಡಿತದಿಂದಾಗಿ ಭಾರೀ ಅನಾಹುತ ತಪ್ಪಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಇದೇ ವೇಳೆ ಅಲ್ಲೇ ಪಕ್ಕದಲ್ಲಿದ್ದ ಸಾರ್ವಜನಿಕ ಕುಡಿಯುವ ನೀರಿನ ಕೊಳವೆ ಬಾವಿಗೂ ಹಾನಿಯಾಗಿದೆ. ಇನ್ನು ಘಟನೆಯಿಂದ ಮೆಸ್ಕಾಂ ಮತ್ತು ಕಬಕ ಗ್ರಾ.ಪಂ ಗೆ ನಷ್ಟ ಉಂಟಾಗಿದೆ ಎನ್ನಲಾಗಿದೆ.

Also Read  ಕೇಕ್ ಗಳಲ್ಲಿ ಕ್ಯಾನ್ಸರ್ ಕಾರಕ ಪತ್ತೆ: FSSAI ಎಚ್ಚರಿಕೆ

 

error: Content is protected !!
Scroll to Top