ನಟಿ ರಾಗಿಣಿ ಜಾಮೀನು ನಿರಾಕರಿಸಿದ ಸುಪ್ರೀಂ ➤ ಇನ್ನೂ 1 ತಿಂಗಳು ಪರಪ್ಪನ ಅಗ್ರಹಾರದಲ್ಲೇ ರಾ’ಗಿಣಿ’

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.04: ಡ್ರಗ್ಸ್ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಸೇರಿರುವ ನಟಿ ರಾಗಿಣಿ ದ್ವಿವೇದಿಗೆ ಇನ್ನೂ ಒಂದು ತಿಂಗಳು ಜೈಲು ಫಿಕ್ಸ್ ಆಗಿದೆ. ರಾಗಿಣಿ ದ್ವಿವೇದಿ ಜಾಮೀನು ಕೋರಿ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಈ ಜಾಮೀನು ಅರ್ಜಿ ವಿಚಾರಣೆಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್ ಜನವರಿ ಮೊದಲ ವಾರಕ್ಕೆ ಮುಂದೂಡಿದೆ. ಇದೇ ವೇಳೆ ಕೋರ್ಟ್, ರಾಜ್ಯ ಸರ್ಕಾರ ಹಾಗೂ ಸಿಸಿಬಿ ಪೊಲೀಸರಿಗೂ ನೋಟಿಸ್ ನೀಡಿದೆ. ಅಲ್ಲದೆ ಅರ್ಜಿ ವಿಚಾರಣೆಯನ್ನು ಮುಂದಿನ ತಿಂಗಳಿಗೆ ಮುಂದೂಡಿಕೆ ಮಾಡಿದೆ.

Also Read  ಪತನದ ಅಂಚಿನಲ್ಲಿ ಖಾಸಗಿ ಬಸ್ ಸೇವಾ ವ್ಯವಸ್ಥೆ - ದ.ಕ. ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘ ಆತಂಕ

Xl

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸೆಪ್ಟೆಂಬರ್ 4ರಂದು ತುಪ್ಪದ ಬೆಡಗಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರಾಗಿಣಿ, ಕೆಳ ನ್ಯಾಯಾಲಯದಲ್ಲಿ ಜಾಮೀನು ಸಿಗದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

error: Content is protected !!
Scroll to Top