(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ಮಂಗಳೂರು – ಬೆಂಗಳೂರಿಗೆ ರಾಜಹಂಸ ಬಸ್ ಸಂಚಾರ ಆರಂಭ ಆರಂಭಗೊಂಡಿದೆ.
ಮಂಗಳೂರು ಬಸ್ಸು ನಿಲ್ದಾಣದಿಂದ ಕುಲಶೇಖರ, ವಾಮಂಜೂರು, ಗುರುಪುರ, ಕೈಕಂಬ, ಗಂಜಿಮಠ, ಎಡಪದವು, ಮಿಜಾರು, ತೋಡಾರು, ಬಡಗಬೆಟ್ಟು, ಮೂಡಬಿದ್ರೆ, ವೇಣೂರು, ಗುರುವಾಯನಕೆರೆ, ಬೆಳ್ತಂಗಡಿ, ಉಜಿರೆ, ಧರ್ಮಸ್ಥಳ, ಕೊಕ್ಕಡ, ಗುಂಡ್ಯ, ಸಕಲೇಶಪುರ, ಹಾಸನ, ಚೆನ್ನರಾಯಪಟ್ಟಣ ಮಾರ್ಗವಾಗಿ ಬೆಂಗಳೂರಿಗೆ ಹಾಗೂ ಬೆಂಗಳೂರಿನಿಂದ ಇದೇ ಮಾರ್ಗವಾಗಿ ಮಂಗಳೂರಿಗೆ ಸಾರ್ವಜನಿಕರ ಬೇಡಿಕೆಗನುಗುಣವಾಗಿ ರಾಜಹಂಸ ವಾಹನವನ್ನು ಡಿಸೆಂಬರ್ 4 ರ ಇಂದಿನಿಂದ ಆರಂಭಿಸಲಾಗಿದೆ. ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದ್ದು ಪ್ರಯಾಣಿಕರು ಹತ್ತಿರದ ರಿಸರ್ವೇಶನ್ ಕೌಂಟರ್ ನ್ನು ಸಂಪರ್ಕಿಸಿ ಸಾರಿಗೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಮಂಗಳೂರು ಕರಾರಸಾಸಂ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.