ಕೆಟ್ಟು ನಿಂತಿದ್ದ ಲಾರಿಗೆ ಬಸ್ ಡಿಕ್ಕಿ ➤ ಓರ್ವ ಪ್ರಯಾಣಿಕ ಮೃತ್ಯು



(ನ್ಯೂಸ್ ಕಡಬ) newskadaba.com ಕಾರವಾರಡಿ. 05: ನಿಂತಿದ್ದ ಲಾರಿಗೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಂಕೋಲಾ ತಾಲ್ಲೂಕಿನ ಮಾಸ್ತಿಕಟ್ಟಾ ಬಳಿ ಶನಿವಾರ ನಸುಕಿನಲ್ಲಿ ಸಂಭವಿಸಿದೆ.







 

ಘಟನೆಯಲ್ಲಿ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ.ದುರಸ್ತಿಗಾಗಿ ರಸ್ತೆ ಬದಿ ನಿಲ್ಲಿಸಲಾಗಿದ್ದ ಲಾರಿಯ ಹಿಂಭಾಗಕ್ಕೆ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.ಗಾಯಾಳುಗಳಿಗೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಘಟನೆಯಲ್ಲಿ ಓರ್ವರ ಸ್ಥಿತಿ ಚಿಂತಾಜನಕವಾಗಿದ್ದು, ಕಾರವಾರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.






error: Content is protected !!
Scroll to Top