ಸಂಬಳ ಸಿಗದೇ ಸಾವಿಗೆ ಶರಣಾದ ಶಿಕ್ಷಕ ➤ “ವಿದ್ಯಾರ್ಥಿಗಳೇ ನಿಮ್ಮ ಭವಿಷ್ಯ ಉಜ್ವಲವಾಗಿರಲಿ” ಎಂದು ಬೋರ್ಡ್ ನಲ್ಲಿ ಬರೆದು ಶಿಕ್ಷಕ

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರಡಿ. 05: ಕೊರೊನಾದಿಂದಾಗಿ ವೇತನವಿಲ್ಲದೆ ಜೀವನ ನಿರ್ವಹಣೆಗೆ ಆರ್ಥಿಕ ಸಂಕಷ್ಟಕ್ಕೆ ನಲುಗಿದ ಖಾಸಗಿ ಶಾಲಾ ಶಿಕ್ಷಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವುದು ಶಿಕ್ಷಕ ವೃಂದದಲ್ಲಿ ಆಘಾತ ಉಂಟುಮಾಡಿದೆ.ಮಂಚೇನಹಳ್ಳಿಯ ಕನಗಾನಕೊಪ್ಪದ ಕೃಷ್ಣಪ್ಪ ಎಂಬುವವರ ಏಕೈಕ ಪುತ್ರ ಚಂದ್ರಶೇಖರ್ (35) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಎಂಎ ಇಂಗ್ಲಿಷ್ ಪದವಿ ವ್ಯಾಸಂಗ ಮಾಡಿದ್ದ ಚಂದ್ರಶೇಖರ್ ಅವರು ಮಂಚೇನಹಳ್ಳಿಯ ಖಾಸಗಿ ಶಾಲೆಯಲ್ಲಿ ಶಿಕ್ಷಕ ವೃತ್ತಿ ಮಾಡುತ್ತಿದ್ದರು. ಜತೆಗೆ ಟ್ಯುಟೋರಿಯಲ್ ನಡೆಸುತ್ತ ಜೀವನಕ್ಕೆ ಆಸರೆಯಾಗಿ ಮಾಡಿಕೊಂಡು ನೆಮ್ಮದಿ ಬದುಕು ಸಾಗಿಸುತ್ತಿದ್ದರು.

ಒಂದೆಡೆ ಹಲವು ವರ್ಷಗಳಿಂದ ಕಾರ್ಯನಿರ್ವಹಿಸಿದರೂ ಅನುದಾನಿತ ಶಿಕ್ಷಕನಾಗಿ ಅನುಮೋದನೆ ದೊರಕಿಸಿಕೊಡದ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ವಿರುದ್ಧ ಸಹೋದ್ಯೋಗಿಗಳೊಂದಿಗೆ ಹಾಗೂ ಸ್ನೇಹಿತರೊಂದಿಗೆ ಅಳಲು ತೋಡಿಕೊಂಡಿದ್ದರು. ವಿವಿಧ ವಲಯಗಳಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿರುವ ಮಾದರಿಯಲ್ಲಿ ನೆರವು ಒದಗಿಸಬೇಕೆಂದು ಶಿಕ್ಷಕ ಸಹೋದ್ಯೋಗಿಗಳು ಒತ್ತಾಯಿಸಿದ್ದರೂ ಫಲ ದೊರೆತಿಲ್ಲ.ಮೊನ್ನೆ ಜಿಲ್ಲೆಯಾದ್ಯಂತ ಜಿಲ್ಲಾ ಕೇಂದ್ರದಲ್ಲಿ ಅಸಂಖ್ಯಾತ ಖಾಸಗಿ ಶಾಲಾ ಶಿಕ್ಷಕರು ಬೀದಿಗಿಳಿದು ವೇತನಕ್ಕೆ ಹೋರಾಟ ನಡೆಸಿದರೂ ಸ್ಪಂದನೆ ಸಿಕ್ಕಿರಲಿಲ್ಲ. ಇದಕ್ಕೆ ಬೇಸತ್ತು ನಿನ್ನೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಂದ್ರಶೇಖರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಕಪ್ಪು ಹಲಗೆಯ ಮೇಲೆ “ನನ್ನ ಸಾವಿಗೆ ಶಿಕ್ಷಣ ಸಂಸ್ಥೆ ಕಾರಣ ಎಂದು ಬರೆದಿದ್ದಾರೆ. ಅಲ್ಲದೆ, ವಿದ್ಯಾರ್ಥಿಗಳೇ ನಿಮ್ಮ ಭವಿಷ್ಯ ಉಜ್ವಲವಾಗಿರಲಿ” ಎಂದು ಬರೆದುಕೊಂಡಿದ್ದಾರೆ

Also Read  ರಾಜ್ಯದ 4 ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ- ಆರೋಗ್ಯ ಕ್ಷೇತ್ರಕ್ಕೆ ಭಾರಿ ಕೊಡುಗೆ

 

error: Content is protected !!
Scroll to Top