ಹಳೆಯಂಗಡಿ ಬಳಿ ಟೆಂಪೋ ಡಿಕ್ಕಿ ಪ್ರಕರಣ ➤ ಚಿಕಿತ್ಸೆ ಫಲಕಾರಿಯಾಗದೆ ಗಾಯಾಳು ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಮುಲ್ಕಿಡಿ. 07: ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಕೆನರಾ ಬ್ಯಾಂಕ್ ಬಳಿ ಕಳೆದ ದಿನ ಬೆಳಿಗ್ಗೆ ಟೆಂಪೋ ಡಿಕ್ಕಿ ಹೊಡೆದು ನಡೆದ ಅಪಘಾತದಲ್ಲಿ ಮಹಿಳೆ ಮೃತಪಟ್ಟಿದ್ದಾರೆ.

Xl

ಹಳೆಯಂಗಡಿ ಬಸ್ ನಿಲ್ದಾಣ ಬಳಿಯ ನಿವಾಸಿಗಳಾದ ತಾಯಿ ಸುಖಲತಾ(44) ಅವರ ಮಗ ಚಿರಾಗ್(10) ರಸ್ತೆ ಬದಿ ನಡೆದುಕೊಂಡು ಹೋಗುತ್ತಿರುವಾಗ ಉಡುಪಿ ಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಟೆಂಪೋ ಹಳೆಯಂಗಡಿ ಸಮೀಪಿಸುತ್ತಿದಂತೆಯೇ ಚಾಲಕನ ನಿಯಂತ್ರಣ ತಪ್ಪಿ ನಡೆದುಕೊಂಡು ಹೋಗುತ್ತಿದ್ದ ತಾಯಿ ಮತ್ತು ಮಗನಿಗೆ ಡಿಕ್ಕಿ ಹೊಡೆದು ಬಳಿಕ ಟೆಂಪೋ ಡಿವೈಡರ್ ಮೇಲೇರಿ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದಿತ್ತು. ಗಂಭೀರ ಗಾಯಗೊಂಡ ಇಬ್ಬರನ್ನೂ ಸ್ಥಳೀಯರು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದು, ತಾಯಿ ಸುಖಲತಾ (44) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಗ ಚಿರಾಗ್ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾನೆ.ಅಪಘಾತದಿಂದ ಚಾಲಕ ಪವಾಡಸದೃಶ ಪಾರಾಗಿದ್ದ.ಸುರತ್ಕಲ್ ಟ್ರಾಫಿಕ್ ಪೊಲೀಸರು ಟೆಂಪೋ ಚಾಲಕನನ್ನು ಬಂಧಿಸಿದ್ದಾರೆ.

Also Read  ಕುಮಾರಧಾರೆಯಲ್ಲಿ ನೀರಿನ ಮಟ್ಟ ಹೆಚ್ಚಳ ➤ ಸ್ನಾನಘಟ್ಟ ಜಲಾವೃತ

Xl

 

error: Content is protected !!
Scroll to Top