ದ.ಕ :ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆ ➤ ಇಂದಿನಿಂದ ನಾಮ ಪತ್ರ ಸಲ್ಲಿಕೆ, ಇವಿಎಂ ಬಳಕೆಯಿಲ್ಲ

(ನ್ಯೂಸ್ ಕಡಬ) newskadaba.com ಮಂಗಳೂರುಡಿ. 07: ದಕ್ಷಿಣ ಕನ್ನಡ ಜಿಲ್ಲೆಯ 220 ಗ್ರಾಮ ಪಂಚಾಯತ್ ಗಳ 3,222 ಸ್ಥಾನಗಳಿಗೆ ಎರಡು ಹಂತದಲ್ಲಿ ನಡೆಯುವ ಚುನಾವಣೆಗೆ ಸಿದ್ಧತೆ ನಡೆದಿದ್ದು, ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಮೊದಲ ಹಂತದಲ್ಲಿ 106 ಮತ್ತು ಎರಡನೇ ಹಂತದಲ್ಲಿ 114 ಗ್ರಾ.ಪಂ.ಗಳಿಗೆ ಮತದಾನ ನಡೆಯಲಿದೆ. ಜಿಲ್ಲೆಯಲ್ಲಿ 5,12,808 ಪುರುಷರು ಮತ್ತು 5,26,288 ಮಹಿಳೆಯರ ಸಹಿತ ಒಟ್ಟು 10,39,096 ಮತದಾರರು ಮತದಾನ ಮಾಡಲು ಅರ್ಹತೆ ಹೊಂದಿದ್ದಾರೆ ಎಂದು ಅವರು ತಿಳಿಸಿದ್ದಾರೆ.ಚುನಾವಣೆಯಲ್ಲಿ ಇವಿಎಂ ಬಳಕೆಯಿಲ್ಲ, ಇದರ ಜತೆಗೆ ಮುಖ್ಯವಾಗಿ ಕೋವಿಡ್ 19 ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Also Read  ಕಸ್ತೂರಿ ರಂಗನ್ ವರದಿ ವಿರುದ್ದ ಕುಟ್ರುಪಾಡಿಯಲ್ಲಿ ಪ್ರತಿಭಟನೆ - ಅರಣ್ಯ ಭೂಮಿಯ ಜಂಟಿ ಸರ್ವೆಗೆ ಆಗ್ರಹ

 

error: Content is protected !!
Scroll to Top