ರಾಜ್ಯ ಮಟ್ಟದ ಮೂರು ದಿನಗಳ ಕಮ್ಮಟಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.08:ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕುವೆಂಪು ಸಾಹಿತ್ಯ : ಪರಿಸರಯಾನ ಎಂಬ ರಾಜ್ಯ ಮಟ್ಟದ ಮೂರು ದಿನಗಳ ಕಮ್ಮಟವನ್ನು ಡಿಸೆಂಬರ್ 27 ರಿಂದ 29 ರವರೆಗೆ ಕುಪ್ಪಳ್ಳಿಯ ಕುವೆಂಪು ಪ್ರತಿಷ್ಠಾನ ಇವರ ಸಹಯೋಗದೊಂದಿಗೆ ಕುಪ್ಪಳ್ಳಿ, ಶಿವಮೊಗ್ಗ ಜಿಲ್ಲೆಯಲ್ಲಿ ನಡೆಸಲು ಉದ್ದೇಶಿಸಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತಿಯಿರುವ 20 ರಿಂದ 40ವರ್ಷದೊಳಗಿನ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಡಿಸೆಂಬರ್ 11 ರೊಳಗೆ ಅರ್ಜಿ ಸಲ್ಲಿಸಬೇಕು.  ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ, ವೆಬ್‍ಸೈಟ್ http://karnatakasahithyaacademy.org ಹಾಗೂ ದೂ.ಸಂ 080-22211730, 22106460 ನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ವಿಪರೀತ ಗಾಳಿ - ಮಳೆಯ ಹಿನ್ನೆಲೆ ➤ ಬೆಳ್ತಂಗಡಿ ತಾಲೂಕಿನಲ್ಲಿ ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ

Xl

error: Content is protected !!
Scroll to Top