ಬೆಳ್ತಂಗಡಿ: ಬಾಲಕಿಯ ಅತ್ಯಾಚಾರ ಪ್ರಕರಣ ➤ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.08: ಬಾಲಕಿಯ ಅತ್ಯಾಚಾರ ಪ್ರಕರಣದ ಆರೋಪಿಗೆ 10 ವರ್ಷ ಕಾರಾಗೃಹ ಶಿಕ್ಷೆ ಮತ್ತು 60,000 ರೂ. ದಂಡ ವಿಧಿಸಿ ಮಂಗಳೂರಿನ ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಪೋಕ್ಸೊ ನ್ಯಾಯಾಲಯ ಸೋಮವಾರ ತೀರ್ಪು ಪ್ರಕಟಿಸಿದೆ.ಬೆಳ್ತಂಗಡಿ ತಾಲೂಕಿನ ಕಾಶಿಪಟ್ನ ಕುರಪ್ಪಾಡಿ ನಿವಾಸಿ ಸತೀಶ್ ಶಿಕ್ಷೆಗೊಳಗಾದವ. ಆರೋಪಿಯು ಅತ್ಯಾಚಾರ ಎಸಗಿದ ಆರೋಪ ಸಾಬೀತಾಗಿದೆ ಎಂಬುದಾಗಿ ನ್ಯಾಯಾಲಯ ಡಿ.1ರಂದು ಅಭಿಪ್ರಾಯಪಟ್ಟಿತ್ತು. ಇದೀಗ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ.

ಆರೋಪಿಗೆ ಐಪಿಸಿ ಸೆ.376 ಅನ್ವಯ ಏಳು ವರ್ಷದ ಕಾರಾಗೃಹ ಶಿಕ್ಷೆ ಮತ್ತು 10,000 ರೂ. ದಂಡ ಹಾಗೂ ದಂಡ ತೆರಲು ತಪ್ಪಿದರೆ ಆರು ತಿಂಗಳ ಸಾದಾ ಶಿಕ್ಷೆ, ಪೋಕ್ಸೊ ಕಾಯ್ದೆ ಸೆಕ್ಷನ್ 6 ರ ಪ್ರಕಾರ 10 ವರ್ಷದ ಜೈಲು ಶಿಕ್ಷೆ ಮತ್ತು 50,000 ರೂ. ದಂಡ ಹಾಗೂ ದಂಡ ಪಾವತಿಸಲು ತಪ್ಪಿದರೆ ಎಂಟು ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿ ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶೆ ಸಾವಿತ್ರಿ ವೆಂಕಟರಮಣ ಭಟ್ ತೀರ್ಪು ನೀಡಿದ್ದಾರೆ. ದಂಡ ಮೊತ್ತದಲ್ಲಿ 50,000 ರೂ.ನ್ನು ಸಂತ್ರಸ್ತ ಬಾಲಕಿಗೆ ಪಾವತಿಸಬೇಕು. ಮಾತ್ರವಲ್ಲದೆ ಸರಕಾರದಿಂದ ಆರು ಲಕ್ಷ ರೂ.ಗಳನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡಬೇಕೆಂದೂ ನ್ಯಾಯಾಧೀಶರು ಆದೇಶಿಸಿದ್ದಾರೆ.

Also Read  ಬಂಟ್ವಾಳ: ರಾಷ್ಟ್ರ ಮಟ್ಟದ ಹಿರಿಯರ ಕ್ರೀಡಾಕೂಟ      ➤  ಗ್ಲೇಡಿಸ್ ಪಾಯ್ಸ್ ಗೆ ಪ್ರಥಮ ಸ್ಥಾನ

2018 ರ ಜನವರಿಯಲ್ಲಿ ಆರೋಪಿ ಸತೀಶ್ ಎಂಬಾತ ಬಾಲಕಿಯನ್ನ ಅತ್ಯಾಚಾರವೆಸಗಿದ್ದಾನೆ.2018 ರ ಆಗಷ್ಟ್ ತಿಂಗಳಿನಲ್ಲಿ ಬಾಲಕಿಯ ಮೃತಪಟ್ಟಿದ್ದಾರೆ. ಈ ಸಮಯದಲ್ಲಿ ಬಾಲಕಿಯ ನಡತೆ ಬಗ್ಗೆ ಅನುಮಾನ ಬಂದ ಪ್ರಶ್ನಿಸಿದಾಗ ಆರೋಪಿ ಸತೀಶ್ ಎಂಬಾತ ಅತ್ಯಾಚಾರವೆಸಗಿರುವ ವಿಚಾರ ಬೆಳಕಿಗೆ ಬಂದಿದೆ. ಈ ಕುರಿತಂತೆ ವೇನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

error: Content is protected !!
Scroll to Top