(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.09: ಅರಬ್ಬಿ ಸಮುದ್ರದಲ್ಲಿ ಚಂಡ ಮಾರುತ ಕಂಡು ಬಂದಿರುವ ಹಿನ್ನೆಲೆಯಲ್ಲಿ ಕರಾವಳಿಯಾದ್ಯಂತ ಇನ್ನೂ ಎರಡು ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕಡಬ ತಾಲೂಕು, ಸುಳ್ಯ ತಾಲೂಕು, ಪುತ್ತೂರು ತಾಲೂಕು ಸೇರಿದಂತೆ ಕರಾವಳಿಯಾದ್ಯಂತ ಕಳೆದ ದಿನ ಗುಡುಗು ಸಹಿತ ಭಾರೀ ಗಾಳಿ ಮಳೆಯಾಗಿದೆ.
ಚಂಡಮಾರುತ ಪರಿಚಲನೆ ಆಗ್ನೇಯ ಅರಬ್ಬಿ ಸಮುದ್ರ ಮತ್ತು ಹಿಂದೂ ಮಹಾ ಸಾಗರ ಸಮಭಾಜಕ ವೃತ್ತದ ಬಳಿ ಸಮುದ್ರ ಮಟ್ಟಕ್ಕಿಂತ 3.1 ಕಿ.ಮೀ. ಎತ್ತರದಲ್ಲಿ ಕೇಂದ್ರೀಕೃತವಾಗಿದೆ. ಪರಿಣಾಮ ಗಾಳಿಯಿಂದಾಗಿ ಮೋಡಗಳ ಚಲನೆ ಹೆಚ್ಚಾಗಿ ಕರಾವಳಿ ಭಾಗದಲ್ಲಿ ಇನ್ನೂ ಎರಡು ದಿನ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.