ಕ್ರಿಕೆಟ್‌ಗೆ ವಿದಾಯ ಹೇಳಿದ ಪಾರ್ಥೀವ್ ಪಟೇಲ್.!

(ನ್ಯೂಸ್ ಕಡಬ) newskadaba.com ಮುಂಬೈ, ಡಿ.09: ಟೀಂ ಇಂಡಿಯಾ ಹಾಗೂ ಆರ್‍ಸಿಬಿ ತಂಡದ ವಿಕೆಟ್ ಕೀಪರ್ ಪಾರ್ಥೀವ್ ಪಟೇಲ್ ಅವರು ಇಂದು 17 ವರ್ಷಗಳ ಕ್ರಿಕೆಟ್ ಜೀವನಕ್ಕೆ ಗುಡ್‍ಬೈ ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ಮಂಡಳಿಗೆ ಅವರು ರಾಜೀನಾಮೆ ಪತ್ರ ನೀಡುವ ಮೂಲಕ ತಾವು ಇನ್ನು ಮುಂದೆ ಯಾವುದೇ ಮಾದರಿಯ ಕ್ರಿಕೆಟ್‍ನಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಆರ್‍ಸಿಬಿ ತಂಡದ ಭರವಸೆಯ ಆಟಗಾರನಾಗಿದ್ದ ಪಾರ್ಥೀವ್ ಪಟೇಲ್‍ಗೆ 2013ರ ಐಪಿಎಲ್‍ನಲ್ಲಿ ಒಂದೇ ಒಂದು ಪಂದ್ಯ ಆಡಲು ಅವಕಾಶ ಸಿಕ್ಕಿರಲಿಲ್ಲ ಹಾಗೂ ಭಾರತ ತಂಡದಲ್ಲೂ ಸ್ಥಾನ ಪಡೆಯಲು ಪದೇ ಪದೇ ಎಡವುತ್ತಿದ್ದರಿಂದ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.ಪಾರ್ಥೀವ್ ಪಟೇಲ್‍ರ ನಾಯಕತ್ವದಲ್ಲೇ ಗುಜರಾತ್ ತಂಡವು ಮೊದಲ ಬಾರಿಗೆ ರಣಜಿ ಟ್ರೋಫಿಯನ್ನು ಗೆದ್ದು ಸಂಭ್ರಮಿಸಿತ್ತು.

Also Read  ಕಟ್ಟಡದಿಂದ ಬಿದ್ದು ಪೊಲೀಸ್ ಅಧಿಕಾರಿ ಮೃತ್ಯು..!

error: Content is protected !!
Scroll to Top