ದ.ಕ.‌ ಪ್ರಥಮ‌ ಹಂತದ ಗ್ರಾಪಂ ಚುನಾವಣೆ ➤ 68 ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.09:ದ.ಕ. ಜಿಲ್ಲೆಯಲ್ಲಿ ಡಿ.22ರಂದು ನಡೆಯಲಿರುವ ಮೊದಲ ಹಂತದ ಗ್ರಾಪಂ ಚುನಾವಣೆಗೆ ಎರಡನೆಯ ದಿನವಾದ ಮಂಗಳವಾರ 38 ನಾಮಪತ್ರಗಳು ಸಲ್ಲಿಕೆಯಾಗಿವೆ.

 

ಮಂಗಳೂರು ತಾಲೂಕಿನಲ್ಲಿ 8, ಮೂಡುಬಿದಿರೆ ತಾಲೂಕಿನಲ್ಲಿ 3 ಮತ್ತು ಬಂಟ್ವಾಳ ತಾಲೂಕಿನಲ್ಲಿ 27 ನಾಮಪತ್ರಗಳು ಸಲ್ಲಿಕೆಯಾಗಿವೆ.
ನಾಮಪತ್ರಿಕೆಯ ಮೊದಲ ದಿನ ಒಟ್ಟು 22 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಮಂಗಳವಾರ ಸಲ್ಲಿಕೆಯಾದ 38 ನಾಮಪತ್ರಗಳು ಸೇರಿ ಈವರೆಗೆ ಒಟ್ಟು 68 ನಾಮಪತ್ರಗಳು ಸಲ್ಲಿಕೆಯಾಗಿದೆ. ಶುಕ್ರವಾರ ನಾಮಪತ್ರ ಸಲ್ಲಿಸಲು ಕೊನೇಯ ದಿನವಾಗಿದೆ.ಜಿಲ್ಲೆಯಲ್ಲಿ ಪ್ರಥಮ‌ ಹಂತದಲ್ಲಿ 1,681 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಎರಡನೇ ಹಂತದಲ್ಲಿ 1541 ಸ್ಥಾನಗಳಿಗೆ ಮತದಾನ ನಡೆಯಲಿದೆ. ಒಟ್ಟು ಜಿಲ್ಲೆಯಲ್ಲಿ 3,222 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

Also Read  ಚಾಲಕ ಮತ್ತು ಕಂಡಕ್ಟರ್‌ ನಡುವೆ ರಂಪಾಟ ! ➤ ರಸ್ತೆಯ ಮಧ್ಯೆ ಬಸ್ ನಿಲ್ಲಿಸಿ ಹೊಡೆದಾಟ

 

 

error: Content is protected !!
Scroll to Top