ಬಂಟ್ವಾಳ :ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಆರೋಗ್ಯಾಧಿಕಾರಿ ಸ್ಥಿತಿ ಗಂಭೀರಾ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.11: ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಡಾ.ರವಿಕೃಷ್ಣ ಪುಣಚ ಅಧಿಕಾರಿಗಳ ಕಿರುಕುಳಕ್ಕೆ ನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಇನ್ನು ಆರೋಗ್ಯಾಧಿಕಾರಿ ನನ್ನ ಸಾವಿಗೆ ಮೇಲಾಧಿಕಾರಿಗಳ ಕಿರುಕುಳವೇ ಕಾರಣ ಎಂದು ಪತ್ರ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. “ನನಗೆ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿ ಲೀನಾ ಬಿಟ್ಟೋ ಪ್ರತಿದಿನ ಅನಗತ್ಯವಾಗಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಜೊತೆಗೆ ಕಚೇರಿಯ ಸಿಬ್ಬಂದಿ ಇಕ್ಬಾಲ್ ಕೂಡ ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾನೆ. ನಾನು ಬಂಟ್ವಾಳ ಪುರಸಭೆಗೆ 5 ತಿಂಗಳ ಹಿಂದೆ ಕರ್ತವ್ಯಕ್ಕೆ ಹಾಜರಾಗಿದ್ದೆ. ಮೊದಲ ಎರಡು ತಿಂಗಳು ಯಾವುದೇ ಸಮಸ್ಯೆ ಇರಲಿಲ್ಲ. ಬಳಿಕ ನಿರಂತವಾಗಿ ಅನಗತ್ಯ ಬೈಗುಳ, ಕಿರುಕುಳ ನೀಡುತ್ತಿದ್ದಾರೆ. ಹೀಗಾಗಿ ಮುಖ್ಯಾಧಿಕಾರಿಯ ವಿರುದ್ಧ ಕ್ರಮಕೈಗೊಳ್ಳಿ, ಇನ್ಯಾರಿಗೂ ಇಂತಹ ತೊಂದರೆಯಾಗಬಾರದು ಎಂದು ಪತ್ರದಲ್ಲಿ ಬರೆದಿದ್ದಾರೆ.ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ರವಿಕೃಷ್ಣ ಪುಣಚ ಇದೀಗ ಗಂಭೀರ ಸ್ಥಿತಿಯಲ್ಲಿದ್ದು, ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Also Read  ವಿಟ್ಲ: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ - ಮೂರನೇ ಆರೋಪಿ ಅರೆಸ್ಟ್

 

error: Content is protected !!
Scroll to Top