ಮಂಗಳೂರು :ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ಹೆಸರಿಡಲು ಸಿಎಂಗೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.11: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರ ಪುರುಷ ಕೋಟಿ-ಚೆನ್ನಯ್ಯರ ಹೆಸರು ನಾಮಕರಣ ಮಾಡುವ ಪ್ರಸ್ತಾವವನ್ನು ರಾಜ್ಯ ಸಚಿವ ಸಂಪುಟದಲ್ಲಿ ಅನುಮೋದಿಸಿ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡುವಂತೆ ಕರಾವಳಿಯ ಶಾಸಕರುಗಳು ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಮಾಡಿದರು.

ಗುರುವಾರ ಬೆಳಿಗ್ಗೆ ಮುಖ್ಯಮಂತ್ರಿಗಳನ್ನ ಭೇಟಿಯಾದ ನಿಯೋಗದಲ್ಲಿ ಶಾಸಕರಾದ ಸುನೀಲ್ ಕುಮಾರ್, ಡಾ.ವೈ ಭರತ್ ಶೆಟ್ಟಿ, ರಘುಪತಿ ಭಟ್, ಸಂಜೀವ ಮಠಂದೂರು, ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ರಾಜೇಶ್ ನಾಯ್ಕ್ ಉಪಸ್ಥಿತರಿದ್ದರು.

Also Read  2025ರ ಕೇಂದ್ರ ಬಜೆಟ್: ನಿರ್ಮಲಾ ಸೀತಾರಾಮನ್‌ ಅವರಿಗೆ ಸಲಹೆ ನೀಡಲು ಜನಸಾಮಾನ್ಯರಿಗೆ ಅವಕಾಶ

 

error: Content is protected !!
Scroll to Top