ಬಂಟ್ವಾಳ :ಮದುವೆ ಸಮಾರಂಭಗಳಲ್ಲಿ ಚಿನ್ನದ ಸರ ಎಗರಿಸುತ್ತಿದ್ದ ಚೋರಿ ಮಹಿಳೆ ಅಂದರ್

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಡಿ.12: ಮದುವೆ ಹಾಲ್ ನಲ್ಲಿ ಮಕ್ಕಳ ಕತ್ತಿನಿಂದ, ಮಹಿಳೆಯರ ಬ್ಯಾಗ್ ನಿಂದ ಚಿನ್ನಭಾರಣ ಕದಿಯುತ್ತಿದ್ದ ಮಹಿಳೆ ಈಗ ಬಂಟ್ವಾಳ ನಗರ ಪೊಲೀಸ್ ಠಾಣೆಯ ಅತಿಥಿಯಾಗಿದ್ದಾಳೆ.

 

ಇತ್ತೀಚಿನ ದಿನಗಳಲ್ಲಿ ಮದುವೆ ಹಾಲ್ ಗಳಲ್ಲಿ ಮಹಿಳೆಯರ ಬ್ಯಾಗ್, ಚಿಕ್ಕ ಮಕ್ಕಳ ಕತ್ತಿನಿಂದ ಚಿನ್ನದ ಸರ ಕಳವಾಗುತ್ತಿರುವ ಬಗ್ಗೆ ಹಾಲ್ ನ ಸಿಸಿ ಟಿವಿಯಲ್ಲಿ ಸೆರೆಯಾಗಿರುವ ದೃಶ್ಯ ಆಧರಿಸಿ ಹಾಲ್ ಮಾಲೀಕರು ಬಂಟ್ವಾಳ ನಗರ ಮತ್ತು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಗುರುವಾರ ಪಾಣೆಮಂಗಳೂರಿನ ಆಡಿಟೋರಿಯಂವೊಂದರಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಮಹಿಳೆಯೊಬ್ಬಳು ಹೆಣ್ಣುಮಗುವೊಂದನ್ನು ಪುಸಲಾಯಿಸಿ ಆ ಮಗುವಿನ ಕತ್ತಿನಿಂದ ಚಿನ್ನದ ಸರ ಕಸಿಯಲು ಯತ್ನಿಸಿದಾಗ ಮಗು ಕಿರುಚಿತ್ತು. ತಕ್ಷಣ ಅಲ್ಲಿ ಸೇರಿದ್ದವರು ಮಹಿಳೆಯನ್ನು ಹಿಡಿದು ಬಂಟ್ವಾಳ ನಗರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದರು. ಬಳಿಕ ಅಪರಾಧ ವಿಭಾಗದ ಎಸ್ ಐ ಕಲೈಮಾರ್ ಮತ್ತವರ ಸಿಬ್ಬಂದಿ ಈ ಮಹಿಳೆಯ ವಿಚಾರಣೆ ನಡೆಸಿದಾಗ ಹಲವು ಮದುವೆ ಹಾಲ್ ನಲ್ಲಿ ಈ ಕೃತ್ಯ ನಡೆಸಿರುವುದನ್ನು ಬಾಯಿಬಿಟ್ಟಿದ್ದಳು. ಕಳವುಗೈದಿರುವ ಚಿನ್ನಾಭರಣ ಕರಗಿಸಿ ಹೊಸ ರೂಪ ನೀಡಿರುವ ಸುಮಾರು 234 ಗ್ರಾಂ ಚಿನ್ನವನ್ನು ಫಾತಿಮಾಳಿಂದ ವಶಪಡಿಸಲಾಗಿದೆ.10 ವರ್ಷಗಳಿಂದ ಆಕೆ ಈ ಕೃತ್ಯದಲ್ಲಿ ತೊಡಗಿದ್ದಾಳೆ ಎಂದು ಪೊಲೀಸರ ತನಿಖೆ ವೇಳೆ ಬಯಲಾಗಿದೆ. ಆರೋಪಿಯನ್ನು ಕೋರ್ಟ್ ಗೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Also Read  ಪಾಕ್‌ಗೆ ಗುಪ್ತ ಮಾಹಿತಿ ರವಾನೆ ➤ ರಕ್ಷಣಾ ಸಂಸ್ಥೆಯ ವಿಜ್ಞಾನಿಯ ಬಂಧನ

 

error: Content is protected !!
Scroll to Top