ದೇವಿಪ್ರಸಾದ್ ಕಾನತ್ತೂರು ರವರಿಗೆ ಹೃದಯವಂತರು 2020’ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.12: ಹೃದಯವಾಹಿನಿ ಮಂಗಳೂರು ಮತ್ತು ಎಸ್.ಕೆ. ಮುನ್ಸಿಪಲ್ ಎಂಪ್ಲಾಯಸ್ ಯೂನಿಯನ್ ಆಶ್ರಯದಲ್ಲಿ ಇಂದು ಮಂಗಳೂರಿನ ಪುರಭವನದಲ್ಲಿ ನಡೆದ 13ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ ಗ್ರಾಮೀಣ ಪಶುವೈದ್ಯಕೀಯ ಸೇವೆ, ಸಮಾಜ ಸೇವೆ ಹಾಗೂ ಧಾರ್ಮಿಕ ಸೇವೆಗಾಗಿ ಪಂಜದ ಡಾ. ದೇವಿಪ್ರಸಾದ್ ಕಾನತ್ತೂರು ಹಾಗೂ ಹಲವು ಸಾಧಕರಿಗೆ ‘ಹೃದಯವಂತರು 2020’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ದೂರದರ್ಶನದ ವಿಶ್ರಾಂತ ಹೆಚ್ಚುವರಿ ಮಹಾನಿರ್ದೇಶಕ ಡಾ.ಮಹೇಶ್ ಜೋಷಿ ಸಮ್ಮೇಳನಾಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಕನ್ನಡ ಸಮ್ಮೇಳನ ಅಧ್ಯಕ್ಷ ಕೆ.ಪಿ.ಮಂಜುನಾಥ್ ಸಾಗರ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು, ಮಂಗಳೂರು ಶಾಸಕ ವೇದವ್ಯಾಸ ಕಾಮತ್, ಮಾಜಿ ಶಾಸಕ ಡಾ.ಮೊಯಿದೀನ್ ಬಾವ, ಹರತಾಳ ಹಾಲಪ್ಪ, ಜ್ಯೋತಿಷಿ ಹಾಗೂ ಆಧ್ಯಾತ್ಮಿಕ ಚಿಂತಕ ಡಾ. ಜೆ.ಆರ್. ಮನೋಜ್ ಶರ್ಮ ಮೊದಲಾದವರು ಉಪಸ್ಥಿತರಿದ್ದರು.

Also Read  ಉಪ್ಪಿನಂಗಡಿ- ಸುಬ್ರಮಣ್ಯ ರಾಜ್ಯ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ - ದುರಸ್ತಿಗಾಗಿ ಕೆಮ್ಮಾರ ನಾಗರಿಕ ಹಿತರಕ್ಷಣಾ ವೇದಿಕೆ ವತಿಯಿಂದ ಲೋಕೋಪಯೋಗಿ ಇಲಾಖೆ ಮತ್ತು ಶಾಸಕರಿಗೆ ಮನವಿ

 

error: Content is protected !!
Scroll to Top