ಸಾರಿಗೆ ನೌಕರರ ಮುಷ್ಕರ ➤ ಆಸ್ತಿಪಾಸ್ತಿ ನಷ್ಟಕ್ಕೆಲ್ಲಾ ಕೋಡಿಹಳ್ಳಿ ಚಂದ್ರಶೇಖರ್ ಹೊಣೆ: ಸಿಎಂ ಬಿಎಸ್ವೈ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.13: ರೈತ ಸಂಘದ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್ ಅವರು ದುರುದ್ದೇಶದಿಂದ ಕೆಲವು ಸಾರಿಗೆ ನೌಕರರನ್ನು ಎತ್ತಿಕಟ್ಟಿ ಮುಷ್ಕರ ನಡೆಸಲು ಹಾಗೂ ರಾಜ್ಯದ ವಿವಿಧೆಡೆ ಕೆ.ಎಸ್.ಆರ್.ಟಿ.ಸಿ ಹಾಗೂ ಬಿ.ಎಂ.ಟಿ.ಸಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲು ಪ್ರಚೋದಿಸಿ, ಸಾರ್ವಜನಿಕ ಆಸ್ತಿಪಾಸ್ತಿಯ ನಷ್ಟಕ್ಕೆ ಹೊಣೆಯಾಗಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.

ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿರುವ ಮುಖ್ಯಮಂತ್ರಿ ಅವರು, “ಸಾರಿಗೆ ಸಂಸ್ಥೆಯ ನೌಕರರು ಮುಷ್ಕರ ನಡೆಸುತ್ತಿರುವುದು ಅತ್ಯಂತ ದುರದೃಷ್ಟಕರ. ಇದರಿಂದ ರಾಜ್ಯದೆಲ್ಲೆಡೆ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಈಗಾಗಲೇ ಸಾರಿಗೆ ಸಂಸ್ಥೆಯ ನೌಕರರ ಸಮಸ್ಯೆಗಳನ್ನು ಪ್ರಾಮಾಣಿಕವಾಗಿ ಬಗೆಹರಿಸಲು ಸಾರಿಗೆ ಸಚಿವ ಲಕ್ಷ್ಮಣ ಸವದಿಗೆ ಸಲಹೆ ಸೂಚನೆಗಳನ್ನು ನೀಡಿದ್ದು, ನಿರಂತರ ಪ್ರಯತ್ನ ಮಾಡುತ್ತಿದ್ದಾರೆ” ಎಂದು ತಿಳಿಸಿದ್ದಾರೆ.ಸಾರ್ವಜನಿಕ ಹಿತದೃಷ್ಟಿಯಿಂದ ಕೂಡಲೇ ಸತ್ಯಾಗ್ರಹವನ್ನು ನಿಲ್ಲಿಸಿ ಕರ್ತವ್ಯಕ್ಕೆ ಮರಳಿ ನಂತರ ಸಾರಿಗೆ ಸಚಿವರ ಜೊತೆ ಚರ್ಚೆಗೆ ಬರಲು ಮನವಿ ಮಾಡಿದ್ದಾರೆ.

Also Read  ನಗರದಲ್ಲಿ ಮತ್ತೊಂದು 'ಉರ್ದುವಿನಲ್ಲಿ ಕಾಣಿಸಿಕೊಂಡ ಉಗ್ರ' ಬರಹ

 

 

 

error: Content is protected !!
Scroll to Top