ದ.ಕ. ಜಿಲ್ಲಾಧಿಕಾರಿ ಕೆ.ಜಿ.ಜಗದೀಶ್ ವರ್ಗಾವಣೆ ► ನೂತನ ಜಿಲ್ಲಾಧಿಕಾರಿಯಾಗಿ ಶಶಿಕಾಂತ್ ಸೆಂತಿಲ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.10. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ಜಿ.ಜಗದೀಶ್ ರವರನ್ನು ರಾಜ್ಯ ಗಣಿ ಹಾಗೂ ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿ ವರ್ಗಾಯಿಸಿ ರಾಜ್ಯ ಸರ್ಕಾರ ಮಂಗಳವಾರದಂದು ಆದೇಶಿಸಿದೆ.

ಗಣಿ ಹಾಗೂ ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿ ಕರ್ತವ್ಯದಲ್ಲಿದ್ದ 2009ರ ಬ್ಯಾಚ್ ನ ಐಎಎಸ್‌ ಅಧಿಕಾರಿ ಶಶಿಕಾಂತ್ ಸೆಂತಿಲ್ ಎಸ್.ರವರನ್ನು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಿದೆ.

Scroll to Top