(ನ್ಯೂಸ್ ಕಡಬ) newskadaba.com ಉಡುಪಿ, ಡಿ.13: ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯರು ವಯೋಸಹಜ ಅನಾರೋಗ್ಯದಿಂದ (85) ನಿಧನರಾಗಿದ್ದಾರೆ. .ಪದ್ಮಶ್ರೀ ಪುರಸ್ಕೃತ ಬನ್ನಂಜೆ ಗೋವಿಂದಾಚಾರ್ಯರು ಉಡುಪಿಯ ಅಂಬಲಪಾಡಿ ನಿವಾಸದಲ್ಲಿಂದು ಕೊನೆಯುಸಿರೆಳೆದಿದ್ದಾರೆ.
ಪ್ರವಚನಕಾರ, ಮಧ್ವ ಸಿದ್ಧಾಂತದ ಪ್ರತಿಪಾದಕ ಹಾಗೂ ಪತ್ರಕರ್ತರಾಗಿಯೂ ಗುರುತಿಸಿಕೊಂಡಿದ್ದ ಅವರು ನಟ ಡಾ.ವಿಷ್ಣುವರ್ಧನ್ ಗೆ ಆಧ್ಯಾತ್ಮಿಕ ಗುರುಗಳಾಗಿದ್ದರು. ಹಲವಾರು ಕೃತಿಗಳನ್ನು ಸಂಸ್ಕೃತದಿಂದ ಕನ್ನಡಕ್ಕೆ ಅನುವಾದಿಸಿದ್ದು, ಕನ್ನಡದ ಪ್ರಮುಖ ಮೂರು ಚಲನಚಿತ್ರಗಳಾದ ಮಧ್ವಾಚಾರ್ಯ, ಶಂಕರಾಚಾರ್ಯ, ರಾಮಾನುಜಾಚಾರ್ಯಕ್ಕೆ ಸಂಭಾಷಣೆಯನ್ನು ಬರೆದಿದ್ದರು.1936ರಲ್ಲಿ ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿ ಜನಿಸಿದ್ದ ಗೋವಿಂದಾಚಾರ್ಯರು ಅಪಾರ ವಿದ್ವತ್ ಉಳ್ಳವರಾಗಿದ್ದರು.ಬನ್ನಂಜೆ ಗೋವಿಂದಾಚಾರ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.