(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.13. ಮೂರು ದಿನಗಳ ನಿರಂತರ ಮುಷ್ಕರದ ನಂತರ ಕೆಎಸ್ಸಾರ್ಟಿಸಿ ಸಿಬ್ಬಂದಿ ಮತ್ತು ಸರ್ಕಾರದ ನಡುವಿನ ಸಭೆ ಯಶಸ್ವಿಯಾಗಿರುವ ಹಿನ್ನೆಲೆ ಮುಷ್ಕರ ಹಿಂಪಡೆಯಲು ನಿರ್ಧರಿಸಿದ್ದ ಸಾರಿಗೆ ನೌಕರರು ಇದೀಗ ಉಲ್ಟಾ ಹೊಡೆದಿದ್ದು, ಸರಕಾರಕ್ಕೆ ಮತ್ತೆ ಶಾಕ್ ನೀಡಿದ್ದಾರೆ.
ವಿಕಾಸಸೌಧದಲ್ಲಿ ಇಂದು ಕೆಎಸ್ಸಾರ್ಟಿಸಿ ಸಂಘದ ರಾಜ್ಯಾಧ್ಯಕ್ಷ ಚಂದ್ರು ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸೇರಿದಂತೆ ಅನೇಕರು ಸಂಧಾನ ಮಾತುಕತೆ ನಡೆಸಿ ಮುಷ್ಕರವನ್ನು ಅಂತ್ಯಗೊಳಿಸಿದ್ದರು. ಸಚಿವರೊಂದಿಗಿನ ಮಾತುಕತೆಯ ನಂತರ ಫ್ರೀಂಡಂ ಪಾರ್ಕ್ಗೆ ಆಗಮಿಸಿದ ಸಂಘದ ಅಧ್ಯಕ್ಷ ಚಂದ್ರು ಉಲ್ಟಾ ಹೊಡೆದಿದ್ದಾರೆ. ಸಾರಿಗೆ ಸಚಿವರ ಜತೆ ನಡೆಸಿದ ಸಂಧಾನ ವಿಫಲವಾಗಿದ್ದು, ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವವರೆಗೆ ಮುಷ್ಕರ ಮುಂದುವರಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ. ಇದರಿಂದ ಸರ್ಕಾರಕ್ಕೆ ಮತ್ತೆ ಆತಂಕ ಎದುರಾಗಿದೆ.