ಮುಲ್ಕಿ : ಬೈಕ್ ಗೆ ಕಾರು ಡಿಕ್ಕಿ ➤ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.14: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಕೊಲ್ನಾಡು ಜಂಕ್ಷನ್ ಬಳಿ ಕಾರು ಬೈಕ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗಾಯಾಳು ಬೈಕ್ ಸವಾರನನ್ನು ಕೃಷ್ಣಾಪುರ ಕಾಟಿಪಳ್ಳ ನಿವಾಸಿ ಅಜೀಂ(20) ಗುರುತಿಸಲಾಗಿದೆ. ಬೈಕ್ ಸವಾರ ಸುರತ್ಕಲ್ ಕಾಟಿಪಳ್ಳ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ ಮುಲ್ಕಿ ಸಮೀಪದ ಕೊಲ್ನಾಡು ಜಂಕ್ಷನ್ ಬಳಿ ಕೊಲ್ನಾಡು ಇಂಡಸ್ಟ್ರಿಯಲ್ ಏರಿಯಾ ಒಳ ರಸ್ತೆಯಿಂದ ಏಕಾಏಕಿ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.ಅಪಘಾತದ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಬಿದ್ದಿದ್ದು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುರತ್ಕಲ್ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Also Read  ಲೋಕಾಯುಕ್ತ ಅಧಿಕಾರಿಗಳ ಭರ್ಜರಿ ಭೇಟೆ   ➤ನಿವೃತ್ತ ಡಿಸಿಎಫ್‌ ನಾಗರಾಜು ಮನೆಯಲ್ಲಿ ಆನೆ ದಂತ ಪತ್ತೆ..!

 

error: Content is protected !!
Scroll to Top