ಮೃಗಾಲಯದಲ್ಲಿದ್ದ 6 ತಿಂಗಳ ಆನೆ ಮರಿ ಅನಾರೋಗ್ಯದಿಂದ ಸಾವು

(ನ್ಯೂಸ್ ಕಡಬ) newskadaba.com ಮೈಸೂರು, ಡಿ.14: ಜಯಚಾಮರಾಜೇಂದ್ರ ಮೃಗಾಲಯದಲ್ಲಿದ್ದ 6 ತಿಂಗಳ ಆನೆ ಮರಿ ವೇದಾವತಿ ಅನಾರೋಗ್ಯದಿಂದ ಭಾನುವಾರ ಮೃತಪಟ್ಟಿದೆ. ತಾಯಿಯಿಂದ ತಪ್ಪಿಸಿಕೊಂಡಿದ್ದ ಈ ಆನೆ ಮರಿಯನ್ನು ಬಿಳಿಗಿರಿರಂಗನ ಬೆಟ್ಟದಲ್ಲಿ ಆರು ತಿಂಗಳ ಹಿಂದೆಯಷ್ಟೆ ರಕ್ಷಣೆ ಮಾಡಲಾಗಿತ್ತು.ವೇದಾವತಿ ಆನೆಮರಿಯು ಅನಾರೋಗ್ಯದಿಂದ ಚೇತರಿಸಿಕೊಳ್ಳದೆ ಭಾನುವಾರ (ಡಿ.13) ಬೆಳಿಗ್ಗೆ 11 ಗಂಟೆ ಸಮಯದಲ್ಲಿ ತೀರಿಕೊಂಡಿದೆ.

ಸಹಜವಾಗಿ ಯಾವುದೇ ಆನೆಮರಿಗಳು ಹುಟ್ಟಿದ ಒಂದು ವರ್ಷದೊಳಗೆ ಅವುಗಳ ಆರೈಕೆ ತುಂಬಾ ಸೂಕ್ಷ್ಮತೆಯಿಂದ ಕೂಡಿರುತ್ತದೆ.ಅದರಲ್ಲೂ ವೇದಾವತಿ ಆನೆಮರಿಗೆ ಸ್ವತಃ ಆಹಾರ ಸೇವಿಸುವ ಶಕ್ತಿ ಇರಲಿಲ್ಲ. ಹೀಗಾಗಿ ಸೋಮು ಅವರೇ ಆಹಾರ ಸಿದ್ಧಪಡಿಸಿ ಪೋಷಿಸಿಸುತ್ತಿದ್ದರು. ಆನೆಮರಿಗೆ ಸೋಂಕು ಕಾಣಿಸಿಕೊಂಡು ಮೃತಪಟ್ಟಿದೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ಅಜಿತ್ ಕುಲಕರ್ಣಿ ತಿಳಿಸಿದ್ದಾರೆ.

Also Read  ಪರಿಶಿಷ್ಟ ಜಾತಿ ಕುಶಲಕರ್ಮಿಗಳ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

 

 

error: Content is protected !!
Scroll to Top