ಕೊರೊನಾ ವೈರಸ್​ಗೆ ಹೈಕೋರ್ಟ್​ ನ್ಯಾಯಮೂರ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಡಿ.14: ಮಧ್ಯಪ್ರದೇಶ ಹೈಕೋರ್ಟ್​ನ ಇಂದೋರ್ ಪೀಠದ ನ್ಯಾಯಮೂರ್ತಿ ವಂದನಾ ಕಸರೇಕರ್ ಅವರು ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್​-19 ಚಿಕಿತ್ಸೆ ಪಡೆಯುತ್ತಿದ್ದಾಗ ಮೃತಪಟ್ಟಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

60 ವರ್ಷದ ಕಸಾರೇಕರ್ ಅವರು ಬಹಳ ಹಿಂದಿನಿಂದಲೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಹೇಳಿದ್ದಾರೆ.ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ನ್ಯಾಯಮೂರ್ತಿ ವಂದನಾ ಕಸರೇಕರ್ ಅವರು ಮೃತಪಟ್ಟಿದ್ದಾರೆ. ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿತ್ತು ಎಂದು ಕೋವಿಡ್​-19ಜಿಲ್ಲಾ ನೋಡಲ್ ಅಧಿಕಾರಿ ತಿಳಿಸಿದ್ದಾರೆ.

Also Read  ಇಂದು ಆತೂರಿನಲ್ಲಿ ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನಾ ಸಮಾವೇಶ

error: Content is protected !!
Scroll to Top