ಕುಕ್ಕೇ ಸುಬ್ರಹ್ಮಣ್ಯದಲ್ಲಿ ಸರಳ ಚಂಪಾ ಷಷ್ಠಿ ಹಿನ್ನೆಲೆ ➤ ಡಿಸೆಂಬರ್ 17 ರಿಂದ 20 ರ ವರೆಗೆ ಭಕ್ತರಿಗೆ ದೇವಳ ಪ್ರವೇಶ ಸಂಪೂರ್ಣ ನಿಷೇಧ

(ನ್ಯೂಸ್ ಕಡಬ) newskadaba.com ಕುಕ್ಕೇ ಸುಬ್ರಹ್ಮಣ್ಯ, ಡಿ.13. ಚಂಪಾಷಷ್ಠಿ ಜಾತ್ರೆ ಆರಂಭಗೊಂಡಿದ್ದು, ಸಾವಿರಾರು ಭಕ್ತರು ಸೇರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುಂಗಡ ನೋಂದಾಯಿಸಿರುವ ಭಕ್ತಾದಿಗಳನ್ನು ಹೊರತುಪಡಿಸಿ ಡಿಸೆಂಬರ್ 17 ರಿಂದ ಡಿಸೆಂಬರ್ 20ರ ವರೆಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ರಥಬೀದಿಗೆ ಭಕ್ತರ ಪ್ರವೇಶ ನಿರ್ಬಂಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ರಥೋತ್ಸವ ಸೇವೆಗಳಿಗೆ ಮುಂಗಡ ನೋಂದಾಯಿಸಿರುವ ಭಕ್ತಾದಿಗಳನ್ನು ಹೊರತುಪಡಿಸಿ, ಷಷ್ಠಿ ಮಹೋತ್ಸವದ ಪ್ರಯುಕ್ತ ಚೌತಿ, ಪಂಚಮಿ ಹಾಗೂ ಷಷ್ಠಿ ರಥೋತ್ಸವಗಳನ್ನು ಒಳಗೊಂಡಂತೆ ದೇವಾಲಯಕ್ಕೆ ಹಾಗೂ ರಥಬೀದಿಗೆ ಡಿಸೆಂಬರ್ 17 ರಿಂದ 20ರ ವರೆಗೆ ಎಲ್ಲಾ ಅಂತರ್ ರಾಜ್ಯ ಮತ್ತು ಅಂತರ್ ಜಿಲ್ಲಾ ಪ್ರಯಾಣಿಕರು ಹಾಗೂ ಭಕ್ತಾದಿಗಳ ಆಗಮನವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಆದೇಶವನ್ನು ಪಾಲಿಸದಿದ್ದರೆ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮದಂತೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಲಾಗಿದೆ.

error: Content is protected !!

Join the Group

Join WhatsApp Group