ಸುದ್ದಿ ಬಿಡುಗಡೆಯ ಕಡಬ ವರದಿಗಾರ ಖಾದರ್ ಸಾಹೇಬ್ ಕಲ್ಲುಗುಡ್ಡೆ ನಿಧನ



(ನ್ಯೂಸ್ ಕಡಬ) newskadaba.com ಕಡಬ, ಡಿ. 15. ಅನಾರೋಗ್ಯದಿಂದ ಬಳಲುತ್ತಿದ್ದ ಸುದ್ದಿ ಬಿಡುಗಡೆ ಕಡಬದ ವರದಿಗಾರ ಖಾದರ್ ಸಾಹೇಬ್ ಕಲ್ಲುಗುಡ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ತಡರಾತ್ರಿ ಮೃತಪಟ್ಟಿದ್ದಾರೆ.





ಸಾಮಾಜಿಕ, ರಾಜಕೀಯ ಹಾಗೂ ಧಾರ್ಮಿಕ ರಂಗದಲ್ಲಿ ಸೇವೆ ಸಲ್ಲಿಸಿದ್ದ ಇವರು ಹಲವು ವರ್ಷಗಳಿಂದ ಸುದ್ದಿ ಬಿಡುಗಡೆ ಪತ್ರಿಕೆಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಕೆಲವು ತಿಂಗಳುಗಳಿಂದ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಇವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತೀವ್ರ ಅನಾರೋಗ್ಯಕ್ಕೊಳಗಾದ ಇವರು ಸೋಮವಾರ ರಾತ್ರಿ ಮರಣ ಹೊಂದಿದ್ದಾರೆ.






error: Content is protected !!
Scroll to Top