ಕಡಬ: ಜಾಂಡೀಸ್ ಗೆ ಕಾಲೇಜು ವಿದ್ಯಾರ್ಥಿನಿ ಬಲಿ



(ನ್ಯೂಸ್ ಕಡಬ) newskadaba.com ಕಡಬ, ಡಿ.15. ಅನಾರೋಗ್ಯಕ್ಕೆ ಒಳಗಾಗಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಕಡಬದಿಂದ ವರದಿಯಾಗಿದೆ.





ಮೃತ ಯುವತಿಯನ್ನು ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಹಮೀದ್ ನ್ಯಾಷನಲ್ ಎಂಬವರ ಏಕೈಕ ಪುತ್ರಿ ಫಾತಿಮತ್ ತಬ್’ಶೀರಾ (18) ಎಂದು ಗುರುತಿಸಲಾಗಿದೆ. ಕಳೆದ ನಾಲ್ಕು ದಿನಗಳ ಹಿಂದೆ ಜಾಂಡೀಸ್ (ಹಳದಿ ರೋಗ) ಕಾಣಿಸಿಕೊಂಡಿದ್ದು, ಚಿಕಿತ್ಸೆ ನೀಡಲಾಗಿತ್ತು. ಸೋಮವಾರ ರಾತ್ರಿ ಏಕಾಏಕಿ ಅನಾರೋಗ್ಯ ಕಾಡಿದ ಹಿನ್ನೆಲೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಹಾದಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.






error: Content is protected !!
Scroll to Top