ಬಾಲಕಾರ್ಮಿಕ ಯೋಜನಾ ಸಂಘ ➤ ಅಪಾರ್ಟ್‍ಮೆಂಟ್‍, ಹೋಟೆಲ್, ಗ್ಯಾರೇಜ್‍ಗಳಿಗೆ ಅನಿರೀಕ್ಷಿತ ದಾಳಿ ನಡೆಸಿ ಪರಿಶೀಲನೆ 

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.15: ಬಾಲಕಾರ್ಮಿಕ ಪದ್ಧತಿ ಒಂದು ಸಾಮಾಜಿಕ ಅನಿಷ್ಟ ಪಿಡುಗು ಆಗಿದ್ದು, ಬಾಲ್ಯಾವಸ್ಥೆ, ಕಿಶೋರಾವಸ್ಥೆ ಕಾರ್ಮಿಕ (ನಿಷೇಧ& ನಿಯಂತ್ರಣ)ಕಾಯ್ದೆ-1986ರನ್ವಯ 14 ವರ್ಷದೊಳಗಿನ ಬಾಲ್ಯಾವಸ್ಥೆ ಕಾರ್ಮಿಕರನ್ನು ಯಾವುದೇ ಸಂಸ್ಥೆಯಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿರುತ್ತದೆ.

15 ವರ್ಷದಿಂದ 18 ವರ್ಷದೊಳಗಿನ ಕಿಶೋರಾವಸ್ಥೆಯ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವುದನ್ನು ನಿಷೇಧಿಸಲಾಗಿದೆ.
ಕಾಯ್ದೆಯನ್ನು ಉಲ್ಲಂಘಿಸಿದ ಮಾಲೀಕರಿಗೆ ರೂ.50,000/-ದವರೆಗೆ ದಂಡ ಹಾಗೂ 2 ವರ್ಷದವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುವುದು. ತಪ್ಪಿತಸ್ಥ ಮಾಲೀಕರ ಮೇಲೆ ಪೊಲೀಸ್ ಇಲಾಖೆಯಿಂದ ಎಫ್.ಐ.ಆರ್‍ನ್ನು ಸಹ ದಾಖಲಿಸಲಾಗುವುದು. “ಕೋವಿಡ್-19 ಸಾಂಕ್ರಾಮಿಕ ರೋಗದ ಈ ಸಂದರ್ಭದಲ್ಲಿ ಮಕ್ಕಳನ್ನು ಬಾಲಕಾರ್ಮಿಕತೆಯಿಂದ ಮುಕ್ತವಾಗಿಸಲು ಹಿಂದಿಗಿಂತಲೂ ಹೆಚ್ಚು ಜಾಗರೂಕತೆವಹಿಸುವ ನಿಟ್ಟಿನಲ್ಲಿ ಡಿಸೆಂಬರ್ 14 ರಂದು ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ವತಿಯಿಂದ ಮಂಗಳೂರು ನಗರದ ಅಪಾರ್ಟ್‍ಮೆಂಟ್‍ಗಳು, ಹೋಟೆಲ್, ಗ್ಯಾರೇಜ್‍ಗಳಿಗೆ ಅನಿರೀಕ್ಷಿತ ದಾಳಿ ನಡೆಸಿ ಪರಿಶೀಲನೆ ನಡೆಸಲಾಯಿತು. ಬಾಲ್ಯಾವಸ್ಥೆ, ಕಿಶೋರಾವಸ್ಥೆ ಕಾರ್ಮಿಕ (ನಿಷೇಧ& ನಿಯಂತ್ರಣ)ಕಾಯ್ದೆಯ ಬಗ್ಗೆ ಮಾಹಿತಿ ನೀಡುವುದರೊಂದಿಗೆ ಸ್ಟಿಕ್ಕರ್ ಮತ್ತು ಕರಪತ್ರಗಳನ್ನು ಹಂಚುವ ಮೂಲಕ ಜಾಗೃತಿ ಮೂಡಿಸಲಾಯಿತು. ದಾಳಿಯಲ್ಲಿ ಕಾರ್ಮಿಕ ಅಧಿಕಾರಿ ವಿಲ್ಮಾ ಎಲಿಜಬೆತ್ ತಾವ್ರೋ, ಹಿರಿಯ ಕಾರ್ಮಿಕ ನಿರೀಕ್ಷಕರಾದ ಜೀವನ್ ಕುಮಾರ್, ಮೇರಿ ಪಿ ಡಯಾಸ್, ವಿರೇಂದ್ರ ಕುಂಬಾರ್ ಹಾಗೂ, ಯೋಜನಾ ನಿರ್ದೇಶಕ ಶ್ರೀನಿವಾಸ್ ಪಾಲ್ಗೊಂಡಿದ್ದರು.

Also Read  ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿಗಳಿಗೆ ಬೆಂಕಿ ►ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಸಾರ್ವಜನಿಕರು ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕರಿಂದ ದುಡಿಸಿಕೊಳ್ಳುತ್ತಿರುವುದು ಕಂಡು ಬಂದಲ್ಲಿ ಚೈಲ್ಡ್‍ಲೈನ್ ಸಂಖ್ಯೆ 1098, ಕಾರ್ಮಿಕ ಇಲಾಖೆಯ ದೂರವಾಣಿ ಸಂಖ್ಯೆಗಳಾದ 0824-2435343,2433132,2437479 ಮತ್ತು ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ ಇದರ ದೂರವಾಣಿ ಸಂಖ್ಯೆ 2433131ಗೆ ಕರೆ ಮಾಡಿ ತಿಳಿಸಲು ಸಾರ್ವಜನಿಕರಲ್ಲಿ ಮಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರಾದ ಕೆ.ಬಿ. ನಾಗರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top