ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ ➤ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳ ಹಂಚಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.15: ಪ್ರಸ್ತುತ ಸಾಲಿನ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯತ್ ಚುನಾವಣೆಯು ಪಕ್ಷರಹಿತ ಚುನಾವಣೆಯಾಗಿರುತ್ತದೆ. ಕರ್ನಾಟಕಗ್ರಾಮ ಸ್ವರಾಜ್ ಮತ್ತು ಪಂಚಾಯತ್‍ರಾಜ್ ಅಧಿನಿಯಮ, 1993ರ ಪ್ರಕರಣ 7(2)ರಂತೆ ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನು ಪಕ್ಷದ ಆಧಾರ ರಹಿತವಾಗಿ ನಡೆಸುವುದರಿಂದ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳನ್ನು ಮಾತ್ರ ಹಂಚಿಕೆ ಮಾಡಲಾಗುತ್ತದೆ.

ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಸಭೆ, ಸಮಾರಂಭಗಳನ್ನು ಏರ್ಪಡಿಸಿ, ವೇದಿಕೆ ಮೇಲೆ ಪಕ್ಷದ ಬಾವುಟ, ಬ್ಯಾನರ್‍ಗಳನ್ನು ಬಳಸುವಂತಿಲ್ಲ. ಸ್ಪರ್ಧಿಸುವ ಅಭ್ಯರ್ಥಿಗಳನ್ನು ತಮ್ಮ ಪಕ್ಷದ/ಬೆಂಬಲಿತ ಅಭ್ಯರ್ಥಿ ಎಂದು ಪರಿಚಯಿಸುವುದು ಹಾಗೂ ಅವರ ಪರವಾಗಿ ಮತ ನೀಡಲು ಮತದಾರರನ್ನು ಕೋೀರಬಾರದು. ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು, ರಾಜಕೀಯ ಮುಖಂಡರ ಭಾವಚಿತ್ರ/ ಪಕ್ಷದಚಿಹ್ನೆ ಇರುವ ಕರಪತ್ರಗಳನ್ನು ಮುದ್ರಿಸುವುದು/ ಹಂಚುವುದು ಮಾಡಬಾರದು. ರಾಜಕೀಯ ಮುಖಂಡರ ಭಾವಚಿತ್ರ ರಾಜಕೀಯ ಪಕ್ಷಗಳ ಚಿಹ್ನೆ ಇರುವ ಕರಪತ್ರಗಳು, ಕಟೌಟ್‍ಗಳು, ಬ್ಯಾನರ್ ಮತ್ತು ಬಂಟಿಂಗ್ ಗಳ ಮೂಲಕ ಪ್ರಚಾರ ಮಾಡಬಾರದು ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಟಿ.ವಿ. ಮಾಧ್ಯಮಗಳು, ಪತ್ರಿಕೆಗಳ ಮೂಲಕ ರಾಜಕೀಯ ಮುಖಂಡರ ಭಾವಚಿತ್ರ ಮತ್ತ್ರುರಾಜಕೀಯ ಪಕ್ಷಗಳ ಚಿಹ್ನೆಗಳನ್ನು ಬಳಸಿ ಜಾಹೀರಾತು ನೀಡಬಾರದು.ಈ ರೀತಿಯ ಪ್ರಕರಣಗಳು ಗ್ರಾ.ಪಂ. ಚುನಾವಣೆಯಲ್ಲಿ ಉಲ್ಲಂಘನೆಯಾಗಿರುವುದು ಕಂಡು ಬಂದಲ್ಲಿ ಅಂತಹ ಚುನಾವಣಾ ಸಾಮಾಗ್ರಿಗಳನ್ನು ಮುಟ್ಟುಗೋಲು ಹಾಕಿಕೊಂಡು ಅಂತಹವರ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ.ಜಿಲ್ಲೆಯ ಅಪರಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಭಾರತ- ಬಾಂಗ್ಲಾದೇಶ 2ನೇ ದಿನದ ಟೆಸ್ಟ್ ಪಂದ್ಯಾಟ ಮಳೆಗೆ ಆಹುತಿ

 

 

error: Content is protected !!
Scroll to Top