(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.15: ವಿಧಾನ ಪರಿಷತ್ ಇಂದು ಅಕ್ಷರಶಃ ರಣಾಂಗಣವಾಗಿತ್ತು. ಸಭಾಪತಿ ವಿಚಾರದಲ್ಲಿ ಕಾಂಗ್ರೆಸ್ – ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ, ಕೈ ಕೈ ಮಿಲಾಯಿಸುವಿಕೆ, ನೂಕಾಟ, ತಳ್ಳಾಟಕ್ಕೆ ಸಾಕ್ಷಿಯಾಯಿತು.
ಇಂದು ಬೆಳಗ್ಗೆ 11.10ರ ಸುಮಾರಿಗೆ ಕಲಾಪ ಆರಂಭಗೊಳ್ಳುತ್ತಿದ್ದಂತೆ ಸಭಾಪತಿ ಸ್ಥಾನದಲ್ಲಿ ಉಪ ಸಭಾಪತಿ ಜೆಡಿಎಸ್ ನ ಧರ್ಮೇಗೌಡ ಕುಳಿತಿದ್ದದನ್ನು ಕಂಡು ಆಕ್ರೋಶಗೊಂಡ ಕಾಂಗ್ರೆಸ್ ಸದಸ್ಯರು ಅವರನ್ನು ಎಬ್ಬಿಸಿ ಎಳೆದೊಯ್ದರು. ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ನಡುವೆ ನೂಕಾಟ, ತಳ್ಳಾಟ ನಡೆಯಿತು. ಬಿಜೆಪಿ ಸದಸ್ಯರು ಮತ್ತೆ ಅವರನ್ನು ಕರೆತಂದರು. ಈ ವೇಳೆ ಕಾಂಗ್ರೆಸ್ ಸದಸ್ಯ ಬಸವರಾಜ ಪಾಟೀಲ ಇಟಗಿ ಅವರನ್ನು ಸಭಾಪತಿ ಪೀಠದಲ್ಲಿ ಕಾಂಗ್ರೆಸ್ ಸದಸ್ಯರು ಕುಳ್ಳಿರಿಸಿ ಅವರ ಸುತ್ತಲೂ ನಿಂತುಕೊಂಡರು.ಸಭಾಪತಿ ವಿರುದ್ಧ ಸಲ್ಲಿಸಿರುವ ಅವಿಶ್ವಾಸ ನಿರ್ಣಯ ಸೂಚನೆಯ ಬಗ್ಗೆ ಮೊದಲು ಪ್ರಸ್ತಾಪವಾಗಬೇಕು ಎಂದು ಜೆಡಿಎಸ್- ಬಿಜೆಪಿ ಸದಸ್ಯರು ಒತ್ತಾಯಿಸಿ ಘೋಷಣೆ ಕೂಗಿದರು.