ಹಸಿ ಮೀನುಗಳಿಗೆ ಫಾರ್ಮಾಲಿನ್ ಬಳಸಿದರೆ ಕ್ರಿಮಿನಲ್ ಕೇಸ್ ➤ ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.16: ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಕಳೆದ ಕೆಲವು ತಿಂಗಳುಗಳಿಂದ ಹಸಿ ಮೀನುಗಳಲ್ಲಿ ಜನರ ಆರೋಗ್ಯಕ್ಕೆ ಹಾನಿಯುಂಟು ಮಾಡುವ ಫಾರ್ಮಾಲಿನ್‌ಗಳನ್ನು ವಿಪರೀತವಾಗಿ ಬಳಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಜಿಲ್ಲಾಧಿಕಾರಿ ಕಚೇರಿಗೆ ದೂರುಗಳು ಬಂದಿರುತ್ತವೆ.

 

ಈ ಹಿನ್ನೆಲೆಯಲ್ಲಿ ಹಸಿ ಮೀನುಗಳಿಗೆ ಫಾರ್ಮಾಲಿನ್ ಕಂಡುಬಂದಲ್ಲಿ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.ಜನರ ಆರೋಗ್ಯಕ್ಕೆ ಹಾನಿಯುಂಟು ಮಾಡುವ ಇಂತಹ ಹಾನಿಕಾರಕ ಫಾರ್ಮಾಲಿನ್‌ಗಳನ್ನು ಬಳಸಿಕೊಂಡು ಅನೈತಿಕ ವ್ಯಾಪಾರಗಳಲ್ಲಿ ತೊಡಗಿಕೊಳ್ಳುವವರ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ರ ಅನ್ವಯ ಕಠಿಣ ಕಾನೂನು ಕ್ರಮ ತೆಗೆದುಕೊಂಡು, ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ಇಂಥ ಪ್ರಕರಣಗಳು ಕಂಡುಬಂದಲ್ಲಿ ಸಾರ್ವಜನಿಕರು ಜಿಲ್ಲಾಧಿಕಾರಿ ಕಚೇರಿಯ ಟೋಲ್ ಫ್ರೀ ನಂ. 1077 ಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ದಿನ ಭವಿಷ್ಯ- ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್

 

error: Content is protected !!
Scroll to Top