ರಾಮಕುಂಜ: ಒಕ್ಕಲಿಗ ಗೌಡ ಸೇವಾ ಸಂಘ ► ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಭೇಟಿ, ಕಾಣಿಕೆ ಸಮರ್ಪಣೆ

(ನ್ಯೂಸ್ ಕಡಬ) newskadaba.com ಕಡಬ, ಅ.11. ರಾಮಕುಂಜ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಪರ್ಯಾಯದಲ್ಲಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಫಲ,ಪುಷ್ಪ ಕಾಣಿಕೆಗಳನ್ನು ಸಮರ್ಪಿಸಿ ಆಶೀರ್ವಾದ ಪಡೆದುಕೊಳ್ಳಲಾಯಿತು.

ಒಕ್ಕಲಿಗ ಗೌಡ ಸೇವಾ ಸಂಘದ ರಾಮಕುಂಜ ಗ್ರಾಮ ಸಮಿತಿ ಅಧ್ಯಕ್ಷ ಪದ್ಮಪ್ಪ ಗೌಡ ಕೆದಂಬಾಡಿ, ಮಹಿಳಾ ಸಂಘದ ಅಧ್ಯಕ್ಷೆ ಸುಶೀಲಾ ವಳೆಂಜ, ಒಕ್ಕಲಿಗ ಸ್ವಸಹಾಯ ಟ್ರಸ್ಟ್‌ನ ಒಕ್ಕೂಟದ ಅಧ್ಯಕ್ಷ ಜನಾರ್ದನ ಗೌಡ ಬಾಂತೊಟ್ಟು, ಕುಂಡಾಜೆ ಶಾಲಾ ಎಸ್ಡಿಎಂಸಿ ಅಧ್ಯಕ್ಷ ಮುತ್ತಪ್ಪ ಗೌಡ, ಗೌಡ ಸಂಘದ ಪ್ರಮುಖರಾದ ಬಾಲಕೃಷ್ಣ ಗೌಡ ಕೊಂಡ್ಯಾಡಿ, ರುಕ್ಮಿಣಿ ಬಾಲಕೃಷ್ಣ ಗೌಡ, ಈಶ್ವರ ಗೌಡ ಬಾರಿಂಜ ಸೇರಿದಂತೆ ಹಲವು ಮಂದಿ ಭೇಟಿ ನೀಡಿ ಸ್ವಾಮೀಜಿಯವರಿಗೆ ಫಲಪುಷ್ಪ ಸಮರ್ಪಿಸಿದರು.

Scroll to Top