ಮಂಗಳೂರು: ಖಾಸಗಿ ಶಾಲಾ ಶಿಕ್ಷಕಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.17: ನಗರದ ಖಾಸಗಿ ಶಾಲೆಯೊಂದರ ಶಿಕ್ಷಕಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಗ್ರೆಟಾ ಡಿಸೋಜಾ (40) ಮೃತ ಶಿಕ್ಷಕಿ. ಮೂಲಗಳ ಪ್ರಕಾರ, ಅವರು ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಮೇಜಿನ ಮೇಲೆ ಡೆತ್ ನೋಟ್ ಸಿಕ್ಕಿದ್ದು , ಅದರಲ್ಲಿ ‘ನಾನು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದೇನೆ. ನಾನು ಬದುಕುವುದಿಲ್ಲ’ ಎಂದು ಬರೆಯಲಾಗಿತ್ತು. ಬಳಿಕ ಮಕ್ಕಳು ಹುಡುಕಾಡಿದಾಗ ಮನೆ ಆವರಣದ ಬಾವಿಯಲ್ಲಿ ಶವ ತೇಲುತ್ತಿರುವುದು ಕಂಡು ಬಂದಿತ್ತು ಎಂದು ತಿಳಿದುಬಂದಿದೆ.ಈ ಕುರಿತು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಉಗ್ರ ಪರ ಗೋಡೆ ಬರಹ ಪ್ರಕರಣ ➤ N.I.A ತನಿಖೆಗೆ ಒತ್ತಾಯಿಸಿ ವಿಎಚ್ ಪಿ ಕಾರ್ಯಕರ್ತರ ಪ್ರತಿಭಟನೆ

 

 

error: Content is protected !!
Scroll to Top