ನವ ಮುರುಡೇಶ್ವರದ ನಿರ್ಮಾತೃ ಆರ್ ಎನ್ ಶೆಟ್ಟಿ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.17:  ದೇಶ ವಿದೇಶಗಳಲ್ಲಿ ಖ್ಯಾತಿ ಗಳಿಸಿದ್ದ ಹಿರಿಯ ಉದ್ಯಮಿ, ಶಿಕ್ಷಣ ತಜ್ಞ ಆರ್ ಎನ್ ಶೆಟ್ಟಿ ಗುರುವಾರ ನಿಧನರಾಗಿದ್ದಾರೆ. 92 ವರ್ಷದ ಆರ್ ಎನ್ ಶೆಟ್ಟಿ ಅವರು ಗುರುವಾರ ನಸುಕಿನ 3.30ರ ಸುಮಾರಿಗೆ ನಿಧನರಾದರು ಎನ್ನಲಾಗಿದೆ.

ಡಾ. ರಾಮ ನಾಗಪ್ಪ ಶೆಟ್ಟಿ ಅವರು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಮುರುಡೇಶ್ವರದಲ್ಲಿ 1928ರ ಆಗಸ್ಟ್ 15ರಂದು ಜನಿಸಿದ್ದರು. ಮುರುಡೇಶ್ವರ ದೇವಸ್ಥಾನದ ಆನುವಂಶಿಕ ಆಡಳಿತಾಧಿಯಾಗಿ ಈ ಸ್ಥಳವನ್ನು ಪ್ರೇಕ್ಷಣೀಯ ಕ್ಷೇತ್ರವನ್ನಾಗಿ ಪರಿವರ್ತಿಸಿದ ಕೀರ್ತಿ ಅವರದು. ಮುರುಡೇಶ್ವರದ ಸಮುದ್ರ ತೀರದಲ್ಲಿ 123 ಅಡಿ ಎತ್ತರದ ಶಿವನ ಪ್ರತಿಮೆಯನ್ನು ಸ್ಥಾಪಿಸಿದ್ದರು.

Also Read  ಶಿವಾಜಿನಗರದಲ್ಲಿ ಕೆಂಪು ಕಲ್ಲು ಹಾಸಿ ರಸ್ತೆ ದುರಸ್ತಿ

ಆರ್ ಎನ್ ಶೆಟ್ಟಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಮಧ್ಯಾಹ್ನ 2 ಗಂಟೆಯ ಬಳಿಕ ಬೆಂಗಳೂರಿನ ಉತ್ತರಹಳ್ಳಿಯ ಆರ್ ಎನ್ ಎಸ್ ತಾಂತ್ರಿಕ ವಿದ್ಯಾಲಯ ಕಾಲೇಜು ಆವರಣದಲ್ಲಿ ಇರಿಸಲಾಗುವುದು. ಸಂಜೆ ವೇಳೆ ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

error: Content is protected !!
Scroll to Top