ಮಂಗಳೂರು :ಮಹಿಳೆಯ ಚಿನ್ನದ ಸರ ಕಸಿದು ಬೈಕ್ ಸವಾರ ಪರಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.17: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ ಸಮೀಪದ ಪಾವಂಜೆ ರಾಷ್ಟ್ರೀಯ ಹೆದ್ದಾರಿ ಬಳಿ ಬೈಕಿನಲ್ಲಿ ಬಂದ ಖದೀಮನೊಬ್ಬ ಮಹಿಳೆಯ ಸರ ಕಸಿದು ಪರಾರಿಯಾಗಿದ್ದಾನೆ.

 

ಪಾವಂಜೆ ನಿವಾಸಿ ಸುಧಾಮಣಿ (58) ಎಂಬವರು ಪಾವಂಜೆ ದೇವಸ್ಥಾನದಿಂದ ಪೂಜೆ ಮುಗಿಸಿ ವಾಪಸ್ ಮನೆ ಕಡೆಗೆ ತೆರಳುತ್ತಿದ್ದಾಗ ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಗದ್ದೆ ಕಡೆಗೆ ಇಳಿಯುತ್ತಿದ್ದಾಗ ಬೈಕಿನಲ್ಲಿ ಬಂದ ಕಳ್ಳ, ದಾರಿ ಕೇಳುವ ನೆಪದಲ್ಲಿ ಮಹಿಳೆಯ ಕುತ್ತಿಗೆಗೆ ಕೈ ಹಾಕಿ ಸುಮಾರು 3 ಪವನ್ ತೂಕದ ಚಿನ್ನದ ಸರ ಎಗರಿಸಿದ್ದಾನೆ. ಮಹಿಳೆ ಏನಾಯಿತು ಎಂದು ಸಾವರಿಸಿಕೊಳ್ಳುವಷ್ಟರಲ್ಲಿ ಆ ಚೋರ ಬೈಕಿನಲ್ಲಿ ಪರಾರಿಯಾಗಿದ್ದಾನೆ.

Also Read  ಬೆಳ್ತಂಗಡಿ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು

 

error: Content is protected !!
Scroll to Top